ತಿರುವನಂತಪುರಂ: ಸೂಪರ್ ಸ್ಟಾರ್ ಮೋಹನ್ ಲಾಲ್ ಅಭಿನಯದ ಪುಲಿಮುರುಗನ್ 100 ಕೋಟಿ ಗಳಿಕೆ ಮಾಡಿದ ಮೊದಲ ಮಲಯಾಳ ಸಿನಿಮಾ ಎನ್ನುವ ದಾಖಲೆಗೆ ಪಾತ್ರವಾಗಿದೆ.
ಇದು 25 ಕೋಟಿ ರೂ. ವೆಚ್ಚದಲ್ಲಿ ತಯಾರಾದ ಚಿತ್ರ. ಚಿತ್ರದಲ್ಲಿ ಮೋಹನ್ ಲಾಲ್ ಬೇಟೆಗಾರನ ಪಾತ್ರ ನಿಭಾಯಿಸಿದ್ದಾರೆ. ಬೆಂಗಾಳಿ ಮೂಲದ ನಟಿ ಕಮಲಿನಿ ಮುಖರ್ಜಿ ಅವರ ಪತ್ನಿ ಪಾತ್ರ ನಿರ್ವಹಿಸಿದ್ದಾರೆ.
ಸ್ವತಃ ಮೋಹನ್ ಲಾಲ್ ಈ ಸುದ್ದಿಯನ್ನು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಿಸಿದ್ದಾರೆ. ಈ ಯಶಸ್ಸಿಗೆ ಕಾರಣರಾದ ಅಭಿಮಾನಿಗಳು, ನಿರ್ದೇಶಕ ವೈಶಾಖ್ ಮೊದಲಾದವರಿಗೆ ಧನ್ಯವಾದ ತಿಳಿಸಿದ್ದಾರೆ. ಅಕ್ಟೋಬರ್ 7 ರಂದು ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ