Webdunia - Bharat's app for daily news and videos

Install App

ಪುನೀತ್ ನಮನ: ವಿಡಿಯೋ ನೋಡುತ್ತಲೇ ಬಿಕ್ಕಿ ಬಿಕ್ಕಿ ಅತ್ತ ಶಿವಣ್ಣ, ಅಶ್ವಿನಿ ಪುನೀತ್

Webdunia
ಮಂಗಳವಾರ, 16 ನವೆಂಬರ್ 2021 (16:47 IST)
ಬೆಂಗಳೂರು: ಪವರ್ ‍ಟಾರ್ ಪುನೀತ್ ರಾಜ್ ಕುಮಾರ್ ಗೌರವಾರ್ಥ ಅರಮನೆ ಮೈದಾನದಲ್ಲಿ ಏರ್ಪಡಿಸಿರುವ ‘ಪುನೀತ್ ನಮನ’ ಕಾರ್ಯಕ್ರಮದಲ್ಲಿ ಗಣ್ಯಾತಿ ಗಣ್ಯರು ಭಾಗವಹಿಸಿದ್ದು, ಇಡೀ ಸಭಾಂಗಣವೇ ಭಾವುಕವಾಗಿದೆ.

ಕಾರ್ಯಕ್ರಮದ ಆರಂಭದಲ್ಲಿ ಪುನೀತ್ ಕುರಿತ ವಿಡಿಯೋವೊಂದನ್ನು ಪ್ಲೇ ಮಾಡಲಾಗಿದೆ. ಈ ವಿಡಿಯೋಗೆ ಕಿಚ್ಚ ಸುದೀಪ್ ಧ್ವನಿ ನೀಡಿದ್ದರು. ಈ ವಿಡಿಯೋದಲ್ಲಿ ಪುನೀತ್ ಜೀವನ ಯಾತ್ರೆಯನ್ನು ಹೇಳಲಾಗಿತ್ತು.

ಈ ವಿಡಿಯೋ ನೋಡುತ್ತಲೇ ಪುನೀತ್ ಪತ್ನಿ ಅಶ್ವಿನಿ, ಸಹೋದರ ಶಿವರಾಜ್ ಕುಮಾರ್ ಬಿಕ್ಕಿ ಬಿಕ್ಕಿ ಅತ್ತ ಘಟನೆ ನಡೆದಿದೆ. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಬಿಎಸ್ ಯಡಿಯೂರಪ್ಪ, ಸಚಿವ ಅಶ್ವತ್ಥ್ ನಾರಾಯಣ್, ಆನಂದ್ ಸಿಂಗ್ ಸೇರಿದಂತೆ ರಾಜಕೀಯ ಗಣ್ಯರು ಆಗಮಿಸಿದ್ದಾರೆ.

ಅಲ್ಲದೆ, ಸಿನಿಮಾ ರಂಗದಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್, ರಾಕಿಂಗ್ ಸ್ಟಾರ್ ಯಶ್, ರವಿಚಂದ್ರನ್, ಪ್ರಕಾಶ್ ರೈ, ಜಗ್ಗೇಶ್, ಗಣೇಶ್, ರಚಿತಾ ರಾಂ, ರಮೇಶ್ ಅರವಿಂದ್, ರಾಗಿಣಿ ದ್ವಿವೇದಿ, ಶ್ರುತಿ, ತಾರಾ, ಗಿರಿಜಾ ಲೋಕೇಶ್, ಶರತ್ ಕುಮಾರ್ ಸೇರಿದಂತೆ ಅನೇಕ ಕಲಾವಿದರು ಆಗಮಿಸಿದ್ದಾರೆ. ಇದಲ್ಲದೆ ಇಡೀ ರಾಜ್ ಕುಟುಂಬ ಆಗಮಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆಂಕರ್ ಅನುಶ್ರೀ ಮದುವೆಗೆ ಅಶ್ವಿನಿ ಪುನೀತ್ ಗೈರಾಗಿದ್ದಕ್ಕೆ ಶ್ರೀದೇವಿ ಬೈರಪ್ಪ ಅಲ್ಲ ಇವರೇ ಕಾರಣ

ನಟ ಚಿಕ್ಕಣ್ಣ ಮದುವೆ ಫಿಕ್ಸ್: ಉಪಾಧ್ಯಕ್ಷನ ಮನಸ್ಸು ಕದ್ದವಳು ಯಾರು

ಸಿಎಂ ಸಿದ್ದರಾಮಯ್ಯರನ್ನು ದಿಢೀರ್ ಭೇಟಿಯಾದ ತೆಲುಗು ನಟ ರಾಮ್‌ ಚರಣ್‌

ಬರ್ತ್‌ಡೇಗೂ ಮುನ್ನ ಮೈಸೂರಿನಲ್ಲಿ ಚಾಮುಂಡಿ ತಾಯಿಯ ಆಶೀರ್ವಾದ ಪಡೆದ ಕಿಚ್ಚ ಸುದೀಪ್

ಅಮ್ಮನ ಹುಟ್ಟುಹಬ್ಬಕ್ಕೆ ಹೊಸ ಯೋಜನೆ ಕೈಗೊಂಡ ನಟ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments