ಪುನೀತ್ ನಮನ ಕಾರ್ಯಕ್ರಮಕ್ಕೆ ಬರುವ ಸ್ಟಾರ್ ಗಳ ಲಿಸ್ಟ್ ಇಲ್ಲಿದೆ ನೋಡಿ

Webdunia
ಮಂಗಳವಾರ, 16 ನವೆಂಬರ್ 2021 (09:50 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಇಂದು ನುಡಿ ನಮನ ಸಲ್ಲಿಸಲಾಗುತ್ತಿದ್ದು, ಈ ಕಾರ್ಯಕ್ರಮಕ್ಕೆ ಆಗಮಿಸಲಿರುವ ಗಣ್ಯರ ವಿವರಗಳು ಇಲ್ಲಿವೆ.

ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸಂಪುಟ ಸಚಿವರೆಲ್ಲರೂ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಡಾ.ರಾಜ್ ಕುಟುಂಬದಿಂದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಮತ್ತು ಕುಟುಂಬಸ್ಥರು ಭಾಗಿಯಾಗುತ್ತಾರೆ.

ಇವರಲ್ಲದೆ ಸ್ಯಾಂಡಲ್ ವುಡ್ ನಟರಾದ ಕಿಚ್ಚ ಸುದೀಪ್, ಉಪೇಂದ್ರ, ಯಶ್, ರವಿಚಂದ್ರನ್, ಶ್ರೀಮುರಳಿ, ಧ್ರುವ ಸರ್ಜಾ, ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಗಣೇಶ್ ಹಾಗೂ ಪುನೀತ್ ಜೊತೆ ನಟಿಸಿದ ನಟಿಯರು, ಇತರ ಕಲಾವಿದರು ಆಗಮಿಸಲಿದ್ದಾರೆ.

ಪರಭಾಷಾ ನಟರೂ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಟಾಲಿವುಡ್ ನಿಂದ ಸೂಪರ್ ಸ್ಟಾರ್ ರಜನೀಕಾಂತ್, ಧನುಷ್, ವಿಜಯ್, ಅಜಿತ್, ವಿಜಯ್ ಸೇತುಪತಿ, ಸೂರ್ಯ, ಅಲ್ಲು ಅರ್ಜುನ್, ಜ್ಯೂ.ಎನ್ ಟಿಆರ್, ರಾಮ್ ಚರಣ್ ತೇಜ್, ಚಿರಂಜೀವಿ, ಪ್ರಭಾಸ್, ಮಲಯಾಳಂ ನಟ ಮೋಹನ್ ಲಾಲ್, ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಕಾರ್ಯಕ್ರಮಕ್ಕೆ ಆಗಮಿಸುವ ನಿರೀಕ್ಷೆಯಿದೆ.

ಮೊದಲಿಗೆ ಗುರಕಿರಣ್ ನೇತೃತ್ವದಲ್ಲಿ ಗೀತ ನಮನ ನಡೆಯಲಿದ್ದು, ವಿಜಯ್ ಪ್ರಕಾಶ್, ರಾಜೇಶ್ ಕೃಷ್ಣನ್, ಅನುರಾಧ ಭಟ್, ಶಮಿತಾ ಮಲ್ನಾಡ್ ಈ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಎಲ್ಲಾ ಕಾರ್ಯಕ್ರಮಗಳ ನೇರಪ್ರಸಾರ ಸುದ್ದಿ ಮಾಧ‍್ಯಮಗಳು, ಯೂ ಟ್ಯೂಬ್ ಚಾನೆಲ್ ಗಳಲ್ಲಿ ಮಧ‍್ಯಾಹ್ನ 3 ರಿಂದ ಸಂಜೆ 6 ರವರೆಗೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಮುಂದಿನ ಸುದ್ದಿ
Show comments