ಬೆಂಗಳೂರು: ಹೃದಯಾಘಾತದಿಂದ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಪುನೀತ್ ರಾಜ್ ಕುಮಾರ್ ತಮ್ಮ ಎರಡೂ ಕಣ್ಣುಗಳನ್ನು ದಾನ ಮಾಡಿದ್ದು, ಸಾವಿಗೆ ಮೊದಲು ಬೇರೊಬ್ಬರ ಜೀವನಕ್ಕೆ ಬೆಳಕಾಗಿದ್ದಾರೆ.
ಇನ್ನು, ಪುನೀತ್ ಸಾವು ಇಡೀ ಚಿತ್ರರಂಗವನ್ನು ದಿಗ್ಭ್ರಮೆಗೊಳಿಸಿದೆ. ನಟ ಶಿವರಾಜ್ ಕುಮಾರ್ ಇದೀಗ ಸದಾಶಿವನಗರದಲ್ಲಿರುವ ಪುನೀತ್ ನಿವಾಸಕ್ಕೆ ಆಗಮಿಸಿದ್ದಾರೆ. ಮುಂದಿನ ಕಾರ್ಯಗಳಿಗೆ ತಯಾರಿ ನಡೆಸಲು ಕುಟುಂಬಸ್ಥರೊಂದಿಗೆ ಚರ್ಚೆ ನಡೆಸಲಿದ್ದಾರೆ.