Publish Date: Wed, 28 Oct 2020 (11:08 IST)
Updated Date: Wed, 28 Oct 2020 (11:10 IST)
ಬೆಂಗಳೂರು: ಕಿಚ್ಚ ಸುದೀಪ್ ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅದರ ಅಭಿವೃದ್ಧಿಗೆ ಮುಂದಾಗಿದ್ದರು. ಇದೀಗ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಕೂಡಾ ಅದೇ ಕೆಲಸಕ್ಕೆ ಕೈ ಹಾಕಿದ್ದಾರೆ.
ಪುನೀತ್ ಕೂಡಾ ಈಗ ಸರ್ಕಾರಿ ಶಾಲೆಯೊಂದರ ಅಭಿವೃದ್ಧಿಗೆ 1 ಲಕ್ಷ ರೂ. ದೇಣಿಗೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ಗಂಗಾವತಿ ತಾಲೂಕಿನ ಸರ್ಕಾರಿ ಶಾಲೆಗೆ ದೇಣಿಗೆ ನೀಡಿದ್ದಾರೆ. ಈ ಹಣವನ್ನು ಶಾಲೆಯ ಅಭಿವೃದ್ಧಿ ಮತ್ತು ವಿದ್ಯಾರ್ಥಿಗಳಿಗೆ ಕಲಿಕಾ ಪ್ರೋತ್ಸಾಹಕ್ಕಾಗಿ ಬಳಸಲಾಗುವುದು ಎಂದು ಶಾಲೆ ತಿಳಿಸಿದೆ.