Publish Date: Sat, 04 Mar 2017 (17:38 IST)
Updated Date: Sat, 04 Mar 2017 (17:40 IST)
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ರಂಗಿತರಂಗ ನಿರ್ದೇಶಕ ಅನೂಪ್ ಭಂಡಾರಿ ನಿರ್ದೇಶನದ ಚಿತ್ರದಲ್ಲಿ ಬಣ್ಣಹಚ್ಚಲು ಸಿದ್ಧವಾಗಿದ್ದಾರೆ. ವಿಶೇಷ ಎಂದರೆ ಈ ಚಿತ್ರದ ಪಾತ್ರವರ್ಗದಲ್ಲಿ ನಿರೂಪ್ ಭಂಡಾರಿ ಸಹ ಅಭಿನಯಿಸುತ್ತಿರುವುದು.
ಸದ್ಯಕ್ಕೆ ಅನೂಪ್ ಭಂಡಾರಿ ಅವರು ’ರಾಜರಥ’ ಚಿತ್ರದಲ್ಲಿ ಬಿಜಿಯಾಗಿದ್ದಾರೆ. ಅಂದಹಾಗೆ ಪುನೀತ್ ಚಿತ್ರ ಆಕ್ಷನ್ ಪ್ರಧಾನ ಎನ್ನಲಾಗಿದೆ. ಉಳಿದ ವಿವರಗಳು ಮಾತ್ರ ಸದ್ಯಕ್ಕೆ ಲಭ್ಯವಿಲ್ಲ. ಚಿತ್ರದ ಶೀರ್ಷಿಕೆ, ಪಾತ್ರದಲ್ಲಿ ಯಾರೆಲ್ಲಾ ಇರಲಿದ್ದಾರೆ ಎಂಬಿತ್ಯಾದಿ ವಿವರಗಳು ಇನ್ನಷ್ಟೇ ಹೊರಬೀಳಬೇಕು.
ಇನ್ನೊಂದು ಕಡೆ ಪುನೀತ್ ರಾಜ್ ಕುಮಾರ್ ಅವರು ರಾಜಕುಮಾರ ಚಿತ್ರದಲ್ಲಿ ಬಿಜಿಯಾಗಿದ್ದಾರೆ. ಈ ಚಿತ್ರಕ್ಕೆ ಸಂತೋಷ್ ಆನಂದರಾಮ್ ಆಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರದ ನಾಯಕಿ ಪ್ರಿಯಾ ಆನಂದ್. ಅನಂತ್ ನಾಗ್, ಶರತ್ ಕುಮಾರ್, ಪ್ರಕಾಶ್ ರಾಜ್, ಚಿಕ್ಕಣ್ಣ ಸೇರಿದಂತೆ ಹಲವು ಕಲಾವಿದರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.