ಬೆಂಗಳೂರು: ಡಾರ್ಲಿಂಗ್ ಕೃಷ್ಣ ನಾಯಕರಾಗಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅತಿಥಿ ಪಾತ್ರದಲ್ಲಿ ನಟಿಸಿರುವ ಲಕ್ಕಿ ಮ್ಯಾನ್ ಸಿನಿಮಾದ ಟೀಸರ್ ಬಿಡುಗಡೆ ದಿನಾಂಕ ಬಹಿರಂಗವಾಗಿದೆ.
ಜುಲೈ 25 ರಂದು ಚಿತ್ರದ ಟೀಸರ್ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಪ್ರಕಟಣೆ ನೀಡಿದೆ. ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಕಮರ್ಷಿಯಲ್ ಸಿನಿಮಾ ಇದಾಗಿದೆ.
ಈ ಸಿನಿಮಾದಲ್ಲಿ ಅವರು ಪ್ರಭುದೇವ ಜೊತೆಗೆ ಭರ್ಜರಿ ನೃತ್ಯವನ್ನೂ ಮಾಡಿದ್ದಾರೆ. ನಾಗೇಂದ್ರ ಪ್ರಸಾದ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.