ಬೆಂಗಳೂರು: ಸಿನಿಮಾ ಜೊತೆಗೆ ಸಮಾಜ ಸೇವೆ ಮೂಲಕವೂ ಲಕ್ಷಾಂತರ ಅಭಿಮಾನಿಗಳನ್ನು ಸಂಪಾದಿಸಿದ್ದ ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ಜೀವನ ಕತೆ ಇನ್ನು ಮಕ್ಕಳಿಗೆ ಶಾಲಾ ಪಠ್ಯ ಪುಸ್ತಕದಲ್ಲಿ ಸಿಗಲಿದೆ.
4 ಅಥವಾ 5 ನೇ ತರಗತಿ ಮಕ್ಕಳ ಪಠ್ಯ ಪುಸ್ತಕದಲ್ಲಿ ಪುನೀತ್ ಜೀವನ ಕತೆಯನ್ನು ಅಳವಡಿಸಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಈ ಬಗ್ಗೆ ಅಭಿಮಾನಿಗಳು ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ್ದರು. ಅದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಪುನೀತ್ ಕೇವಲ ಸಿನಿಮಾಗಳಲ್ಲಿ ಮಾತ್ರವಲ್ಲ, ನಿಜ ಜೀವನದಲ್ಲೂ ಸಮಾಜಮುಖೀ ಕೆಲಸಗಳಿಂದ ಆದರ್ಶವಾಗಿದ್ದರು. ಹೀಗಾಗಿ ಅವರ ಜೀವನ ಕತೆಯನ್ನು ಪಠ್ಯದಲ್ಲಿ ಅಳವಡಿಸುವುದರಿಂದ ಮಕ್ಕಳಿಗೆ ಸ್ಪೂರ್ತಿಯಾಗುತ್ತದೆ. ಈ ಬಗ್ಗೆ ತಜ್ಞರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ.