Select Your Language

Notifications

webdunia
webdunia
webdunia
webdunia

ಪುನೀತ್ ರಾಜ್ ಕುಮಾರ್ ಪ್ರೊಡಕ್ಷನ್ ನ ಮೊದಲ ಸಿನಿಮಾ ರೆಡಿ ಆಯ್ತು

ಪುನೀತ್ ರಾಜ್ ಕುಮಾರ್ ಪ್ರೊಡಕ್ಷನ್ ನ ಮೊದಲ ಸಿನಿಮಾ ರೆಡಿ ಆಯ್ತು
ಬೆಂಗಳೂರು , ಶನಿವಾರ, 2 ಮಾರ್ಚ್ 2019 (10:08 IST)
ಬೆಂಗಳೂರು: ಪುನೀತ್ ರಾಜ್ ಕುಮಾರ್ ನಿರ್ಮಾಣ ಸಂಸ್ಥೆ ಪಿಆರ್ ಕೆ ಪ್ರೊಡಕ್ಷನ್ ಬ್ಯಾನರ್ ನಡಿ ತಯಾರಾದ ಮೊದಲ ಸಿನಿಮಾ ‘ಕವಲುದಾರಿ’ ಕೊನೆಗೂ ರೆಡಿಯಾಗಿದೆ.


ಕವಲುದಾರಿ ಸಿನಿಮಾ ಅಡಿಯೋ ಲಾಂಚ್ ಗೆ ಸಿದ್ಧವಾಗಿದ್ದು, ಇದೇ ಮಾರ್ಚ್ 5 ರಂದು ಅಂದರೆ ಮಂಗಳವಾರ ಪಿಆರ್ ಕೆ ಪ್ರೊಡಕ್ಷನ್ ನ ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಲಿದೆ ಎಂದು ಸ್ವತಃ ಪುನೀತ್ ರಾಜ್ ಕುಮಾರ್ ತಿಳಿಸಿದ್ದಾರೆ.

ಕವಲು ದಾರಿ ಸಿನಿಮಾ ಈಗಾಗಲೇ ಸೆನ್ಸಾರ್ ನಲ್ಲಿ ಪಾಸ್ ಆಗಿದೆ. ಈ ಚಿತ್ರದಲ್ಲಿ ರಿಷಿ, ಅನಂತ್ ನಾಗ್ ಮುಂತಾದವರು ಪ್ರಮುಖ ಪಾತ್ರದಲ್ಲಿದ್ದಾರೆ. ವಿಶಿಷ್ಟ ಕಥಾಹಂದರ ಹೊಂದಿರುವ ಕವಲುದಾರಿ ಸದ್ಯದಲ್ಲೇ ತೆರೆಗೆ ಬರಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಪುನೀತ್, ಸುದೀಪ್ ರಂತೆ ಧಾರವಾಹಿಗೆ ನಿರ್ಮಾಪಕರಾದ ರಮೇಶ್ ಅರವಿಂದ್