ಲಕ್ಕಿ ಮ್ಯಾನ್ ಆಗಿ ಆಗಸ್ಟ್ ನಲ್ಲಿ ತೆರೆ ಮೇಲೆ ಬರಲಿದ್ದಾರೆ ಪುನೀತ್ ರಾಜ್ ಕುಮಾರ್

Webdunia
ಬುಧವಾರ, 13 ಜುಲೈ 2022 (16:52 IST)
Photo Courtesy: Twitter
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೊನೆಯದಾಗಿ ಅತಿಥಿ ಪಾತ್ರದಲ್ಲಿ ನಟಿಸಿದ್ದು ಲಕ್ಕಿ ಮ್ಯಾನ್ ಸಿನಿಮಾ ಬಿಡುಗಡೆ ಸಮಯ ಬಹಿರಂಗವಾಗಿದೆ.

ಡಾರ್ಲಿಂಗ್ ಕೃಷ್ಣ ನಾಯಕರಾಗಿರುವ ಈ ಸಿನಿಮಾದಲ್ಲಿ ಪುನೀತ್ ರಾಜ್ ಕುಮಾರ್ ಒಂದು ಹಾಡು ಮತ್ತು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಶೇಷವೆಂದರೆ ಈ ಪಾತ್ರಕ್ಕೆ ಅವರೇ ಡಬ್ ಮಾಡಿದ್ದರು. ಇದಕ್ಕೂ ಮೊದಲು ಅವರು ನಾಯಕರಾಗಿ ಕೊನೆಯ ಬಾರಿ ನಟಿಸಿದ್ದ ಜೇಮ್ಸ್ ಸಿನಿಮಾದಲ್ಲಿ ಅವರದ್ದೇ ಧ್ವನಿ ಇರಲಿಲ್ಲ ಎಂದು ಅಭಿಮಾನಿಗಳಿಗೆ ಬೇಸರವಿತ್ತು. ಆದರೆ ಲಕ್ಕಿ ಮ್ಯಾನ್ ನಲ್ಲಿ ಪುನೀತ್ ಪಾತ್ರಕ್ಕೆ ಅವರದ್ದೇ ಧ್ವನಿಯಿರಲಿದೆ.

ಈ ಸಿನಿಮಾ ಆಗಸ್ಟ್ ನಲ್ಲಿ ಬಿಡುಗಡೆ ಮಾಡುತ್ತಿರುವುದಾಗಿ ಚಿತ್ರತಂಡ ಘೋಷಿಸಿದೆ. ನಾಗೇಂದ್ರ ಪ್ರಸಾದ್ ನಿರ್ದೇಶನದ ಈ ಸಿನಿಮಾದಲ್ಲಿ ಪ್ರಭುದೇವ ಜೊತೆಗೆ ಪುನೀತ್ ಹೆಜ್ಜೆ ಹಾಕಿರುವ ಪವರ್ ಫುಲ್ ಡ್ಯಾನ್ಸ್ ಸ್ಟೆಪ್ ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಳುತ್ತಿದ್ದ ಹರೀಶ್ ರಾಯ್‌ ಮಗನ ಕೈಹಿಡಿದು ಧೈರ್ಯ ತುಂಬಿದ ರಾಕಿಬಾಯ್ ಯಶ್‌

ಗರ್ಲ್‌ಫ್ರೆಂಡ್ ಜತೆಗಿನ ಬೆಚ್ಚಗಿನ ಫೋಟೊ ಹಂಚಿಕೊಂಡ ಹಾರ್ದಿಕ್ ಪಾಂಡ್ಯ

ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟ ಹರೀಶ್ ರಾಯ್ ಇನ್ನಿಲ್ಲ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

ಮುಂದಿನ ಸುದ್ದಿ
Show comments