ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಮ್ಮ ಬ್ಯುಸಿ ಶೆಡ್ಯೂಲ್ ನಡುವೆಯೂ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರಕ್ಕೆ ಭೇಟಿ ನೀಡಿದ್ದಾರೆ.
									
										
								
																	
ಆನೆಗೆ ಸಂಬಂಧಿಸಿದ ಡಾಕ್ಯುಮೆಂಟರಿ ತಯಾರಿ ವಿಚಾರವಾಗಿ ಅವರು ಆನೆ ಬಿಡಾರಕ್ಕೆ ಭೇಟಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
									
			
			 
 			
 
 			
			                     
							
							
			        							
								
																	ಸುಮಾರು ಎರಡು ಗಂಟೆ ಕಾಲ ಅವರಿಲ್ಲಿ ಚಿತ್ರೀಕರಣದಲ್ಲಿ ಭಾಗಿಯಾದರು. ಈ ವೇಳೆ ತಮ್ಮ ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳ ದಂಡೇ ಹರಿದು ಬಂದಿತ್ತು. ಇವರ ಜೊತೆಗೆ ಸೆಲ್ಫೀಗೆ ಪೋಸ್ ಕೊಟ್ಟು ಖುಷಿ ಕೊಟ್ಟಿದ್ದಾರೆ.