Publish Date: Sun, 15 Sep 2019 (08:48 IST)
Updated Date: Sun, 15 Sep 2019 (08:51 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಯುವರತ್ನ ಸಿನಿಮಾದಲ್ಲಿ ನಟಿಸುತ್ತಿರುವ ಸಂಗತಿ ನಿಮಗೆಲ್ಲಾ ಗೊತ್ತೇ ಇರುತ್ತದೆ. ಇದೀಗ ಯುವರತ್ನ ಹೇಗಿರುತ್ತದೆ ಎಂಬ ಅಭಿಮಾನಿಗಳ ಕುತೂಹಲಕ್ಕೆ ಸದ್ಯದಲ್ಲೇ ತೆರೆ ಕಾಣಿಸಲು ಚಿತ್ರತಂಡ ತಯಾರಿ ನಡೆಸಿದೆ.
ಯುವರತ್ನ ಟೀಸರ್ ಯಾವಾಗ ಎಂಬ ಅಭಿಮಾನಿಗಳ ಪ್ರಶ್ನೆಗೆ ಸದ್ಯದಲ್ಲೇ ಉತ್ತರ ಸಿಗಲಿದೆ. ಯುವರತ್ನ ಚಿತ್ರದ ಟೀಸರ್ ಗೆ ಡಬ್ಬಿಂಗ್ ಮುಗಿಸಿರುವ ವಿಚಾರವನ್ನು ಪವರ್ ಸ್ಟಾರ್ ಹಂಚಿಕೊಂಡಿದ್ದಾರೆ.
ಹೀಗಾಗಿ ಸದ್ಯದಲ್ಲೇ ಯುವರತ್ನ ಟೀಸರ್ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಿಸಲಿರುವುದು ಪಕ್ಕಾ ಆಗಿದೆ. ಕಳೆದ ಕೆಲವು ದಿನಗಳಿಂದ ತಮ್ಮ ಮೆಚ್ಚಿನ ನಟನ ಸಿನಿಮಾ ಬಿಡುಗಡೆಗೆ ಕಾಯುತ್ತಿದ್ದ ಅಪ್ಪು ಅಭಿಮಾನಿಗಳಿಗೆ ಈಗ ಗುಡ್ ನ್ಯೂಸ್ ಸಿಕ್ಕಿದೆ.