Webdunia - Bharat's app for daily news and videos

Install App

ಪುಪ್ಪ 2 ಕಾಲ್ತುಳಿತ: ಫೇಕ್ ವಿಡಿಯೋ ಹರಿ ಬಿಡುವವರು ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

Sampriya
ಬುಧವಾರ, 25 ಡಿಸೆಂಬರ್ 2024 (17:04 IST)
Photo Courtesy X
ಹೈದರಾಬಾದ್: ಡಿಸೆಂಬರ್ 4 ರಂದು ನಡೆದ ಪುಷ್ಪ 2 ಪ್ರೀಮಿಯರ್ ಪ್ರದರ್ಶನದ ವೇಳೆ ಕಾಲ್ತುಳಿತ ಪ್ರಕರಣ ಸಂಬಂಧ ನಕಲಿ ವೀಡಿಯೊವೊಂದು ಹರಿದಾಡುತ್ತಿದೆ.  ಫೇಕ್ ವಿಡಿಯೋಗಳನ್ನು ಹರಿಬಿಡುವವರ ವಿರುದ್ಧ ಕಠಿಣ ಕ್ರಮಕ್ಕೆ ಜರುಗಿಸುವುದಾಗಿ ಹೈದರಾಬಾದ್ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಅಲ್ಲು ಅರ್ಜುನ್ ಅಭಿನಯದ ಪುಷ್ಪ 2: ದಿ ರೈಸ್‌ನ ಪ್ರೀಮಿಯರ್ ಸಮಯದಲ್ಲಿ ಆರ್‌ಟಿಸಿ ಎಕ್ಸ್ ರೋಡ್‌ನಲ್ಲಿರುವ ಸಂಧ್ಯಾ ಥಿಯೇಟರ್‌ನಲ್ಲಿ ಕಾಲ್ತುಳಿತ ಸಂಭವಿಸಿದ ವಿಚಾರ ಭಾರೀ ಚರ್ಚೆಯಾಗುತ್ತಿದೆ.  ಈ ದುರಂತದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಆಕೆಯ ಮಗ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದು, ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದಾರೆ.

ಇದೀಗ ಈ ಸಂಬಂಧ ನಕಲಿ ವಿಡಿಯೋಗಳ ಪ್ರಸಾರದ ವಿರುದ್ಧ ಎಚ್ಚರಿಕೆ ನೀಡಿರುವ ಹೈದರಾಬಾದ್ ಪೊಲೀಸರು, ಅಲ್ಲು ಅರ್ಜುನ್ ಆಗಮನದ ಮೊದಲು ಕಾಲ್ತುಳಿತ ಸಂಭವಿಸಿದೆ ಎಂದು ಕೆಲವರು ಸುಳ್ಳು ವೀಡಿಯೊಗಳನ್ನು ಪೋಸ್ಟ್ ಮಾಡಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ಘಟನೆಯ ತನಿಖೆಯ ವೇಳೆ ತಿಳಿದ ಸಂಗತಿಗಳನ್ನು ಪೊಲೀಸ್ ಇಲಾಖೆ ಈಗಾಗಲೇ ವಿಡಿಯೋ ರೂಪದಲ್ಲಿ ಸಾರ್ವಜನಿಕರ ಮುಂದಿಟ್ಟಿದೆ.

ಅಲ್ಲು ಅರ್ಜುನ್ ಆಗಮನಕ್ಕೂ ಮುನ್ನ ಕಾಲ್ತುಳಿತ ಸಂಭವಿಸಿದ ಪರಿಣಾಮ ಕೆಲವರನ್ನು ದಾರಿತಪ್ಪಿಸಲು ಉದ್ದೇಶಪೂರ್ವಕವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ವಿಡಿಯೋಗಳನ್ನು ಪೋಸ್ಟ್ ಮಾಡಿರುವುದು ನಮ್ಮ ಗಮನಕ್ಕೆ ಬಂದಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಪ್ರಕರಣದ ತನಿಖೆಯ ಸಂದರ್ಭದಲ್ಲಿ ಉದ್ದೇಶಪೂರ್ವಕವಾಗಿ ಸುಳ್ಳು ಪ್ರಚಾರ ಮಾಡುವವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಮಾನಹಾನಿ ಮಾಡುವ ಸುಳ್ಳು ಪ್ರಚಾರವನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಅಮಾಯಕ ಮಹಿಳೆಯ ಸಾವು ಮತ್ತು ಮಗುವಿನ ಜೀವಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಈ ಪ್ರಕರಣವನ್ನು ಅತ್ಯಂತ ಬದ್ಧತೆಯಿಂದ ತನಿಖೆ ನಡೆಸುತ್ತಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments