ಹೈದರಾಬಾದ್: ಈಚೆಗೆ ಪುಷ್ಪ 2 ಪ್ರೀಮಿಯರ್ ಶೋ ವೇಳೆ ನೂಕುನುಗ್ಗಲು ಉಂಟಾಗಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಸಂಬಂಧ ಹೈದರಾಬಾದ್‌ನ ಚಿಕ್ಕಡಪಲ್ಲಿ ಪೊಲೀಸರು ನಟ ಅಲ್ಲು ಅರ್ಜುನ್‌ಗೆ ನೋಟಿಸ್ ನೀಡಿದ್ದರು. ಹೀಗಾಗಿ, ಇಂದು ವಿಚಾರಣೆಗೆ ಹಾಜರಾಗಿದ್ದಾರೆ.
ಪುಷ್ಪ 2 ಪ್ರಿಮೀಯರ್ ಶೋ ವೇಳೆ ರೇವತಿ ಎಂಬ ಮಹಿಳೆ ಕಾಲ್ತುಳಿತದಿಂದ ಮೃತಪಟ್ಟಿದ್ದರು. ಈ ಹಿನ್ನೆಲೆ ನಟ ಅಲ್ಲು ಅರ್ಜುನ್‌ಗೆ ಪೊಲೀಸರು ನೋಟಿಸ್ ನೀಡಿದ್ದರು. ಅದರಂತೆ ಇಂದು ಅವರು ವಿಚಾರಣೆಗೆ ಹಾಜರಾಗಿ ಪೊಲೀಸರ ಸರಣಿ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದಾರೆ.
ಡಿ.13ರಂದು ಕಾಲ್ತುಳಿತ ಪ್ರಕರಣ ಸಂಬಂಧ ಅಲ್ಲು ಅರ್ಜುನ್‌ರನ್ನು ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದರು. ನ್ಯಾಯಾಲಯದಲ್ಲಿ ಜಾಮೀನು ಸಿಕ್ಕ ಹಿನ್ನೆಲೆ ನಟ ಬಿಡುಗಡೆಯಾಗಿದ್ದರು.
ಇನ್ನೂ ಮೃತ ರೇವತಿ ಪುತ್ರ ಶ್ರೀತೇಜ ಕೂಡ ಗಂಭೀರ ಸ್ಥಿತಿಯಲ್ಲಿದ್ದಾರೆ. ಅವರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಚಿತ್ರದ ನಿರ್ಮಾಪಕದ ರೇವತಿ ಕುಟುಂಬಕ್ಕೆ ಸೋಮವಾರ ₹ 50 ಲಕ್ಷ ಪರಿಹಾರ ಧನ ನೀಡಿದ್ದಾರೆ.
ಸುಕುಮಾರ್ ನಿರ್ದೇಶನದ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪ 2 ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಎರಡು ವಾರದಲ್ಲಿ ದಾಖಲೆಯ ₹ 1500 ಕೋಟಿ ಬಾಚಿಕೊಂಡು ಯಶಸ್ವಿಯಾಗಿ ಪ್ರದರ್ಶನ ನಡೆಯುತ್ತಿದೆ.