Webdunia - Bharat's app for daily news and videos

Install App

ಪುಷ್ಪ 2 ಪ್ರೀಮಿಯರ್ ಶೋ ವೇಳೆ ಕಾಲ್ತುಳಿತ ಪ್ರಕರಣ: ವಿಚಾರಣೆಗೆ ಹಾಜರಾದ ನಟ ಅಲ್ಲು ಅರ್ಜುನ್

Sampriya
ಮಂಗಳವಾರ, 24 ಡಿಸೆಂಬರ್ 2024 (14:13 IST)
Photo Courtesy X
ಹೈದರಾಬಾದ್‌: ಈಚೆಗೆ ಪುಷ್ಪ 2 ಪ್ರೀಮಿಯರ್ ಶೋ ವೇಳೆ ನೂಕುನುಗ್ಗಲು ಉಂಟಾಗಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಸಂಬಂಧ ಹೈದರಾಬಾದ್‌ನ ಚಿಕ್ಕಡಪಲ್ಲಿ ಪೊಲೀಸರು ನಟ ಅಲ್ಲು ಅರ್ಜುನ್‌ಗೆ ನೋಟಿಸ್ ನೀಡಿದ್ದರು. ಹೀಗಾಗಿ, ಇಂದು ವಿಚಾರಣೆಗೆ ಹಾಜರಾಗಿದ್ದಾರೆ.

ಪುಷ್ಪ 2 ಪ್ರಿಮೀಯರ್ ಶೋ ವೇಳೆ ರೇವತಿ ಎಂಬ ಮಹಿಳೆ ಕಾಲ್ತುಳಿತದಿಂದ ಮೃತಪಟ್ಟಿದ್ದರು. ಈ ಹಿನ್ನೆಲೆ ನಟ ಅಲ್ಲು ಅರ್ಜುನ್‌ಗೆ ಪೊಲೀಸರು ನೋಟಿಸ್ ನೀಡಿದ್ದರು. ಅದರಂತೆ ಇಂದು ಅವರು ವಿಚಾರಣೆಗೆ ಹಾಜರಾಗಿ ಪೊಲೀಸರ ಸರಣಿ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದಾರೆ.

ಡಿ.13ರಂದು ಕಾಲ್ತುಳಿತ ಪ್ರಕರಣ ಸಂಬಂಧ ಅಲ್ಲು ಅರ್ಜುನ್‌ರನ್ನು ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದರು. ನ್ಯಾಯಾಲಯದಲ್ಲಿ ಜಾಮೀನು ಸಿಕ್ಕ ಹಿನ್ನೆಲೆ ನಟ ಬಿಡುಗಡೆಯಾಗಿದ್ದರು.

ಇನ್ನೂ ಮೃತ ರೇವತಿ ಪುತ್ರ ಶ್ರೀತೇಜ ಕೂಡ ಗಂಭೀರ ಸ್ಥಿತಿಯಲ್ಲಿದ್ದಾರೆ. ಅವರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಚಿತ್ರದ ನಿರ್ಮಾಪಕದ ರೇವತಿ ಕುಟುಂಬಕ್ಕೆ ಸೋಮವಾರ ₹ 50 ಲಕ್ಷ ಪರಿಹಾರ ಧನ ನೀಡಿದ್ದಾರೆ.

ಸುಕುಮಾರ್‌ ನಿರ್ದೇಶನದ ಅಲ್ಲು ಅರ್ಜುನ್‌ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪ 2 ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಎರಡು ವಾರದಲ್ಲಿ ದಾಖಲೆಯ ₹ 1500 ಕೋಟಿ ಬಾಚಿಕೊಂಡು ಯಶಸ್ವಿಯಾಗಿ ಪ್ರದರ್ಶನ ನಡೆಯುತ್ತಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments