Webdunia - Bharat's app for daily news and videos

Install App

ಹಿಂದಿ ಅವತರಣಿಕೆಯಲ್ಲಿ ಬರೋಬ್ಬರಿ ₹700 ಕೋಟಿ ಬಾಚಿ ಬಾಕ್ಸಾಫೀಸ್‌ನಲ್ಲಿ ಹೊಸ ದಾಖಲೆ ಬರೆದ ಪುಷ್ಪ 2

Sampriya
ಮಂಗಳವಾರ, 24 ಡಿಸೆಂಬರ್ 2024 (20:46 IST)
ಮುಂಬೈ: ಟಾಲಿವುಡ್‌ ಸ್ಟಾರ್‌ ಅಲ್ಲು ಅರ್ಜುನ್ ಅಭಿನಯದ ಪುಷ್ಪ 2 ಚಿತ್ರವು ವಿಶ್ವದಾದ್ಯಂತ ₹1,500 ಕೋಟಿಗೂ ಅಧಿಕ ಗಳಿಕೆ ಕಂಡಿದೆ. ಇದರಲ್ಲಿ ಬರೋಬ್ಬರಿ ₹ 700 ಕೋಟಿ ಹಿಂದಿ ಅವತರಣಿಕೆಯಿಂದಲೇ ಗಳಿಸಿ ಹೊಸ ದಾಖಲೆ ಬರೆದಿದೆ.

ಬಾಲಿವುಡ್‌ ಬಾಕ್ಸ್‌ ಆಫೀಸ್‌ನಲ್ಲಿ ಈ ಸಾಧನೆ ಮಾಡಿದ ಮೊದಲ ಸಿನಿಮಾ ಎಂಬ ಖ್ಯಾತಿಗೆ ಪುಷ್ಪ 2 ಪಾತ್ರವಾಗಿದೆ. ಪ್ರಭಾಸ್, ರಾಣಾ ದಗ್ಗುಬಾಟಿ, ಅನುಷ್ಕಾ ಶೆಟ್ಟಿ ಅಭಿನಯದ ಬಾಹುಬಲಿ 2 ಹಿಂದಿ ಆವೃತ್ತಿಯಲ್ಲಿ ₹500 ಕೋಟಿ ಗಳಿಸಿತ್ತು. ಆಗ ಆ ಹಂತ ತಲುಪಿದ ಮೊದಲ ಹಿಂದಿ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು.

ಚಿತ್ರಗಳ ವ್ಯವಹಾರ ವಿಶ್ಲೇಷಕ ತರಣ್ ಆದರ್ಶ್ ಪ್ರಕಾರ, ಅಲ್ಲು ಅರ್ಜುನ್ ಅಭಿನಯದ ಹಿಂದಿ ಡಬ್ಬಿಂಗ್ ಆವೃತ್ತಿಯ ಚಿತ್ರವು ಭಾರತೀಯ ಗಲ್ಲಾಪೆಟ್ಟಿಗೆಯಲ್ಲಿ ₹700 ಕೋಟಿ ಗಳಿಸಿದ ಮೊದಲ ಹಿಂದಿ ಚಲನಚಿತ್ರವಾಗಿದೆ. ಹೀಗಾಗಿ, ದೇಶೀಯ ಬಾಕ್ಸ್ ಆಫೀಸ್‌ನಲ್ಲಿ ₹700 ಕೋಟಿ ಕ್ಲಬ್‌ನ ಹೊಸ ಮೈಲುಗಲ್ಲನ್ನು ಸ್ಥಾಪಿಸಿದೆ.

ಈ ತಿಂಗಳಲ್ಲಿ ತೆರೆಕಂಡ ತೆಲುಗಿನ ಪುಷ್ಪ 2 ಡಬ್ಬಿಂಗ್ ಆವೃತ್ತಿಯು 19 ದಿನಗಳಲ್ಲಿ ₹700 ಕೋಟಿಯ ಕ್ಲಬ್ ತೆರೆದಿದೆ. ಕ್ರಿಸ್‌ಮಸ್ ಮತ್ತು ಹೊಸ ವರ್ಷಾಚರಣೆ ಇರುವುದರಿಂದ ಪುಷ್ಪ 2 ದಾಖಲೆಯ ಓಟವನ್ನು ಮುಂದುವರಿಸಲಿದೆ ಎಂದು ತರಣ್ ಆದರ್ಶ್ ಎಕ್ಸ್‌ ಪೋಸ್ಟ್‌ ಮಾಡಿದ್ದಾರೆ.

ಅಮರ್ ಕೌಶಿಕ್ ಅವರ ಮತ್ತೊಂದು ಹಾರರ್ ಕಾಮಿಡಿ ಚಿತ್ರ ಸ್ತ್ರೀ 2 ಹಿಂದಿ ಅವತರಣಿಕೆ ₹600 ಕೋಟಿ ಗಳಿಸಿತ್ತು. ₹600 ಕೋಟಿ ಕ್ಲಬ್ ಸೇರಿದ ಮೊದಲ ಸಿನಿಮಾ ಎಂಬ ದಾಖಲೆಯನ್ನು ಈ ಚಿತ್ರ ಬರೆದಿತ್ತು. ಆ ದಾಖಲೆಯನ್ನೂ ಪುಷ್ಪ 2 ಮುರಿದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ