Webdunia - Bharat's app for daily news and videos

Install App

ಪುಷ್ಪ 2 ಕಾಲ್ತುಳಿತ: ಗಾಯಗೊಂಡ ಬಾಲಕನ ಆರೋಗ್ಯ ವಿಚಾರಿಸಿದ ನಿರ್ದೇಶಕ ಸುಕುಮಾರ್

Sampriya
ಶುಕ್ರವಾರ, 20 ಡಿಸೆಂಬರ್ 2024 (19:28 IST)
Photo Courtesy X
ಬೆಂಗಳೂರು: ಹೈದರಾಬಾದ್‌ನಲ್ಲಿ ಪುಷ್ಪ 2 ಚಿತ್ರ ವೀಕ್ಷಣೆಗೆ ಹೋದಾಗ ಕಾಲ್ತುಳಿತದಲ್ಲಿ ಗಂಭೀರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕನ ಆರೋಗ್ಯವನ್ನು ನಿರ್ದೇಶಕ ಸುಕುಮಾರ್ ವಿಚಾರಿಸಿದರು. ಈ ವೇಳೆ ಬಾಲಕನ ತಂದೆ ಬಳಿ ನಿರ್ದೇಶಕ ಭೇಟಿಯಾದರು.

ಕಾಲ್ತುಳಿತದಲ್ಲಿ ಬಾಲಕನ ತಾಯಿ ಸಾವನ್ನಪ್ಪಿದ್ದು, 8 ವರ್ಷದ ಬಾಲಕ ಇನ್ನೂ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾನೆ ಎನ್ನಲಾಗಿದೆ. ಆತನ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಗಳು ಹೇಳಿವೆ.

ಬಾಲಕನ ಕುಟುಂಬಕ್ಕೆ ಸುಕುಮಾರ್ ಅವರು ₹5 ಲಕ್ಷ ಹಣ ನೀಡಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಡಿಸೆಂಬರ್ 10 ರಂದು ಹೈದರಾಬಾದ್‌ನ ಸಂದ್ಯಾ ಚಿತ್ರಮಂದಿರದಲ್ಲಿ ಪುಷ್ಪ 2 ವೀಕ್ಷಣೆಗೆ ಬಂದಿದ್ದ ಕುಟುಂಬವೊಂದರ ತಾಯಿ-ಮಗು ನೂಕಲಾಟ ಮತ್ತು ಕಾಲ್ತುಳಿತದಿಂದ ಗಂಭೀರವಾಗಿ ಗಾಯಗೊಂಡಿದ್ದರು. ತಾಯಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಈ ಸಂಬಂಧ ನಟ ಅಲ್ಲು ಅರ್ಜುನ್ ವಿರುದ್ಧ ಪ್ರಕರಣ ದಾಖಲಾಗಿದೆ. ಅದಲ್ಲದೆ ಅಲ್ಲು ಅರ್ಜುನ್‌ರನ್ನು ವಶಕ್ಕೆ ಪಡೆಯಲಾಗುತ್ತು. ಒಂದು ದಿನ ಜೈಲಿನಲ್ಲಿ ಕಳೆದು ಬಿಡುಗಡೆಗೊಂಡಿದ್ದರು. ಸಂದ್ಯಾ ಚಿತ್ರಮಂದಿರದ ವಿರುದ್ಧವೂ ಪ್ರಕರಣ ದಾಖಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments