Publish Date: Wed, 31 Mar 2021 (12:36 IST)
Updated Date: Wed, 31 Mar 2021 (12:38 IST)
ಹೈದರಾಬಾದ್ : ನಿರ್ದೇಶಕ ಸುಕುಮಾರ್ ನಿರ್ದೇಶನದ ನಟ ಅಲ್ಲು ಅರ್ಜುನ್ ಅಭಿನಯದ ಪುಷ್ಪಾ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಈ ಮಧ್ಯೆ ಚಿತ್ರದ ಬಿಡುಗಡೆಯ ದಿನವನ್ನು ಮುಂದೂಡಲಾಗಿದೆ ಎಂಬುದಾಗಿ ತಿಳಿದುಬಂದಿದೆ.
ಪುಷ್ಪಾ ಚಿತ್ರವನ್ನು ಆಗಸ್ಟ್ 13ರಂದು ತೆಲುಗು, ಹಿಂದಿ, ತಮಿಳು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ಯಯೋಜಿಸಲಾಗಿತ್ತು. ಆದರೆ ಇತ್ತೀಚೆಗೆ ಬಂದ ಮಾಹಿತಿ ಪ್ರಕಾರ ಚಿತ್ರದ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ ಎನ್ನಲಾಗಿದೆ.
ಸಮಯಕ್ಕೆ ಸರಿಯಾಗಿ ಚಿತ್ರದ ಚಿತ್ರೀಕರಣ ಮುಗಿಸಲು ಸಾಧ್ಯವಾಗದ ಕಾರಣ ಹಾಗೂ ಕೊರೊನಾ ವೈರಸ್ ಹಾವಳಿಯಿಂದ ಚಿಂತೆಗೀಡಾದ ನಿರ್ಮಾಪಕರು ಚಿತ್ರದ ಬಿಡುಗಡೆಯ ದಿನಾಂಕವನ್ನು ಮುಂದೂಡಿದ್ದಾರೆ ಎನ್ನಲಾಗಿದೆ.