Select Your Language

Notifications

webdunia
webdunia
webdunia
webdunia

ಪೈಲ್ವಾನ್ ಪ್ರಿ ರಿಲೀಸ್ ಈವೆಂಟ್ ಗೆ ಬಂದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು

ಪೈಲ್ವಾನ್ ಪ್ರಿ ರಿಲೀಸ್ ಈವೆಂಟ್ ಗೆ ಬಂದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು
ಹೈದರಾಬಾದ್ , ಶನಿವಾರ, 7 ಸೆಪ್ಟಂಬರ್ 2019 (11:23 IST)
ಹೈದರಾಬಾದ್: ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಸಿನಿಮಾ ಕನ್ನಡ ಮಾತ್ರವಲ್ಲದೆ, ತೆಲುಗು, ಹಿಂದಿ, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲೂ ಬಿಡುಗಡೆಯಾಗುತ್ತಿದೆ.


ನಿನ್ನೆ ಹೈದರಾಬಾದ್ ನಲ್ಲಿ ನಡೆದ ಪ್ರಿ ರಿಲೀಸ್ ಈವೆಂಟ್ ಗೆ ಬ್ಯಾಡ್ಮಿಂಟನ್ ತಾರೆ ಪಿ ವಿ ಸಿಂಧು ಆಗಮಿಸಿದ್ದು ವಿಶೇಷವಾಗಿತ್ತು. ಕುಸ್ತಿ ಪಟುಗಳ ಕತೆಯಾಧಾರಿತ ಸಿನಿಮಾ ಇದಾಗಿದ್ದು, ಈ ಸಿನಿಮಾ ಪ್ರಿ ರಿಲೀಸ್ ಸಮಾರಂಭಕ್ಕೆ ಬ್ಯಾಡ್ಮಿಂಟನ್ ಚಾಂಪಿಯನ್ ವಿಶೇಷ ಅತಿಥಿಯಾಗಿ ಬಂದಿದ್ದಾರೆ.

ಸಿಂಧು ಜತೆಗಿನ ಫೋಟೋ ಶೇರ್ ಮಾಡಿಕೊಂಡಿರುವ ಕಿಚ್ಚ ಸುದೀಪ್ ನಿಮ್ಮನ್ನು ಭೇಟಿಯಾಗಿದ್ದು ಗೌರವ ತಂದಿದೆ ಎಂದಿದ್ದಲ್ಲದೆ ಕಾರ್ಯಕ್ರಮಕ್ಕೆ ಬಂದಿದ್ದಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ವರ್ಣರಂಜಿತವಾಗಿ ನಡೆದ ಕಾರ್ಯಕ್ರಮದಲ್ಲಿ ತೆಲುಗು ಆವೃತ್ತಿಯ ಹಾಡುಗಳು ಅನಾವರಣಗೊಂಡಿವೆ. ಪೈಲ್ವಾನ್ ಸೆಪ್ಟೆಂಬರ್ 12 ರಂದು ಬಿಡುಗಡೆಯಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರೊ ಕಬಡ್ಡಿ ಲೀಗ್ ನಲ್ಲಿ ಶ್ರೀ ಮುರಳಿ ಭರಾಟೆ ಟೀಂ