ತೆಲುಗು ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾದ ರಚಿತಾ ರಾಮ್

ಭಾನುವಾರ, 28 ಜೂನ್ 2020 (09:21 IST)
ಬೆಂಗಳೂರು: ಡಿಂಪಲ್ ಕ್ವೀನ್ ರಚಿತಾ ರಾಮ್ ತೆಲುಗಿನಲ್ಲಿ ಮಾಡುತ್ತಿರುವ ಸಿನಿಮಾ ‘ಸೂಪರ್ ಮಚ್ಚಿ’ ಶೂಟಿಂಗ್ ಗಾಗಿ ಹೈದರಾಬಾದ್ ನಲ್ಲಿ ಬೀಡು ಬಿಟ್ಟಿದ್ದಾರೆ.


ಈ ಸಿನಿಮಾ ಚಿತ್ರೀಕರಣ ಲಾಕ್ ಡೌನ್ ನಿಂದಾಗಿ ಅರ್ಧಕ್ಕೇ ನಿಂತಿತ್ತು. ಇದೀಗ ಮತ್ತೆ ಚಿತ್ರೀಕರಣ ಪ್ರಾರಂಭವಾಗಿದ್ದು ರಚಿತಾ ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ನಾಯಕ ಕಲ್ಯಾಣ್ ದೇವ್ ಜತೆಗಿನ ರೊಮ್ಯಾಂಟಿಕ್ ಹಾಡೊಂದರ ಚಿತ್ರೀಕರಣದಲ್ಲಿ ರಚಿತಾ ಪಾಲ್ಗೊಂಡಿದ್ದಾರೆ. ಈ ಸಿನಿಮಾ ಕನ್ನಡದಲ್ಲೂ ಬಿಡುಗಡೆಯಾಗಲಿದೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಅಣ್ಣ ಚಿರಂಜೀವಿ ಸರ್ಜಾ ರಾಜಮಾರ್ತಂಡ ಸಿನಿಮಾಕ್ಕೆ ತಮ್ಮ ಧ್ರುವ ಸರ್ಜಾ ಧ್ವಬನಿ