ಬೆಂಗಳೂರು: ಡಿಂಪಲ್ ಕ್ವೀನ್ ರಚಿತಾ ರಾಂ ಈ ಬಾರಿ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಳ್ಳದೇ ಇರಲು ತೀರ್ಮಾನಿಸಿದ್ದಾರೆ. ಇದಕ್ಕೆ ಸೂಕ್ತ ಕಾರಣವನ್ನೂ ತಿಳಿಸಿದ್ದಾರೆ.
ಅಕ್ಟೋಬರ್ 3 ರಂದು ರಚಿತಾ ರಾಂ ಜನ್ಮದಿನವಿದೆ. ಈ ವರ್ಷ ಹೆಚ್ಚಿನ ಸ್ಟಾರ್ ಗಳೂ ಅಭಿಮಾನಿಗಳ ಜೊತೆ ಸಂಭ್ರಮದಿಂದ ಜನ್ಮದಿನ ಆಚರಿಸಿಕೊಂಡಿದ್ದರು. ಆದರೆ ರಚಿತಾ ತಮ್ಮ ಜನ್ಮದಿನವನ್ನು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ಆಚರಿಸದೇ ಇರಲು ತೀರ್ಮಾನಿಸಿದ್ದಾರೆ.
ಸದ್ಯಕ್ಕೆ ಕರ್ನಾಟಕದಲ್ಲಿ ಕಾವೇರಿ ವಿವಾದದ ವಿಚಾರವಾಗಿ ಹೋರಾಟಗಳು ನಡೆಯುತ್ತಿವೆ. ಮೊನ್ನೆಯಷ್ಟೇ ಚಿತ್ರರಂಗವೂ ಈ ಹೋರಾಟದಲ್ಲಿ ಭಾಗಿಯಾಗಿತ್ತು. ಇದೀಗ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ರಚಿತಾ ಕರ್ನಾಟಕದಲ್ಲಿ ನಡೆಯುತ್ತಿರುವ ಪ್ರಸಕ್ತ ವಿದ್ಯಮಾನಗಳಿಂದಾಗಿ ಈ ವರ್ಷ (ಅಕ್ಟೋಬರ್ 3) ನನ್ನ ಜನ್ಮದಿನವನ್ನು ಆಚರಿಸುವುದು ಸೂಕ್ತವಲ್ಲ ಎನ್ನಿಸುತ್ತಿದೆ. ನಾನು ಮನೆಯಲ್ಲಿ ಇರುವುದಿಲ್ಲವಾದ್ದರಿಂದ ನನ್ನ ಅಭಿಮಾನಿಗಳು ಮನೆಯ ಹತ್ತಿರ ಬರಬೇಡಿ ಎಂದು ದಯೆಯಿಂದ ವಿನಂತಿಸಿಕೊಳ್ಳುತ್ತಿದ್ದೇನೆ. ನಿಮ್ಮ ಪ್ರೀತಿ ಮತ್ತು ಅಭಿಮಾನ ಸದಾ ನನ್ನೊಂದಿಗಿರಲಿ ಎಂದು ಬರೆದುಕೊಂಡಿದ್ದಾರೆ.