Webdunia - Bharat's app for daily news and videos

Install App

ಕಾವೇರಿಗಾಗಿ ಜನ್ಮದಿನ ಸಂಭ್ರಮ ಕ್ಯಾನ್ಸಲ್ ಮಾಡಿಕೊಂಡ ರಚಿತಾ ರಾಂ

Webdunia
ಭಾನುವಾರ, 1 ಅಕ್ಟೋಬರ್ 2023 (08:40 IST)
Photo Courtesy: Twitter
ಬೆಂಗಳೂರು: ಡಿಂಪಲ್ ಕ್ವೀನ್ ರಚಿತಾ ರಾಂ ಈ ಬಾರಿ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಳ್ಳದೇ ಇರಲು ತೀರ್ಮಾನಿಸಿದ್ದಾರೆ. ಇದಕ್ಕೆ ಸೂಕ್ತ ಕಾರಣವನ್ನೂ ತಿಳಿಸಿದ್ದಾರೆ.

ಅಕ್ಟೋಬರ್ 3 ರಂದು ರಚಿತಾ ರಾಂ ಜನ್ಮದಿನವಿದೆ. ಈ ವರ್ಷ ಹೆಚ್ಚಿನ ಸ್ಟಾರ್ ಗಳೂ ಅಭಿಮಾನಿಗಳ ಜೊತೆ ಸಂಭ್ರಮದಿಂದ ಜನ್ಮದಿನ ಆಚರಿಸಿಕೊಂಡಿದ್ದರು. ಆದರೆ ರಚಿತಾ ತಮ್ಮ ಜನ್ಮದಿನವನ್ನು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ಆಚರಿಸದೇ ಇರಲು ತೀರ್ಮಾನಿಸಿದ್ದಾರೆ.

ಸದ್ಯಕ್ಕೆ ಕರ್ನಾಟಕದಲ್ಲಿ ಕಾವೇರಿ ವಿವಾದದ ವಿಚಾರವಾಗಿ ಹೋರಾಟಗಳು ನಡೆಯುತ್ತಿವೆ. ಮೊನ್ನೆಯಷ್ಟೇ ಚಿತ್ರರಂಗವೂ ಈ ಹೋರಾಟದಲ್ಲಿ ಭಾಗಿಯಾಗಿತ್ತು. ಇದೀಗ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ರಚಿತಾ ‘ಕರ್ನಾಟಕದಲ್ಲಿ ನಡೆಯುತ್ತಿರುವ ಪ್ರಸಕ್ತ ವಿದ್ಯಮಾನಗಳಿಂದಾಗಿ ಈ ವರ್ಷ (ಅಕ್ಟೋಬರ್ 3) ನನ್ನ ಜನ್ಮದಿನವನ್ನು ಆಚರಿಸುವುದು ಸೂಕ್ತವಲ್ಲ ಎನ್ನಿಸುತ್ತಿದೆ. ನಾನು ಮನೆಯಲ್ಲಿ ಇರುವುದಿಲ್ಲವಾದ್ದರಿಂದ ನನ್ನ ಅಭಿಮಾನಿಗಳು ಮನೆಯ ಹತ್ತಿರ ಬರಬೇಡಿ ಎಂದು ದಯೆಯಿಂದ ವಿನಂತಿಸಿಕೊಳ್ಳುತ್ತಿದ್ದೇನೆ. ನಿಮ್ಮ ಪ್ರೀತಿ ಮತ್ತು ಅಭಿಮಾನ ಸದಾ ನನ್ನೊಂದಿಗಿರಲಿ’ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments