Webdunia - Bharat's app for daily news and videos

Install App

ಶ್ರೀ ಮುರಳಿ ಚಿತ್ರದಲ್ಲಿ ರಚಿತಾ ರಾಂ ಗೆಸ್ಟ್ ಅಪಿಯರೆನ್ಸ್

Webdunia
ಮಂಗಳವಾರ, 2 ಏಪ್ರಿಲ್ 2019 (07:42 IST)
ಬೆಂಗಳೂರು: ರಚಿತಾ ರಾಂ ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಸ್ಟಾರ್ ನಟರಿಗೆ ಲಕ್ಕಿ ಸ್ಟಾರ್ ಆಗಿ ಗುರುತಿಸಿಕೊಳ್ಳುತ್ತಿದ್ದಾರೆ. ಇದೀಗ ಶ್ರೀಮುರಳಿ ಅಭಿನಯದ ‘ಭರಾಟೆ’ ಚಿತ್ರದ ಹಾಡೊಂದರಲ್ಲಿ ಗೆಸ್ಟ್ ಅಪಿಯರೆನ್ಸ್ ಮಾಡಲು ರಚಿತಾ ಒಪ್ಪಿಕೊಂಡಿರುವ ಸುದ್ದಿ ಬಂದಿದೆ.


ರಚಿತಾ ರಾಂ ಈ ಹಿಂದೆ ‘ರಥಾವರ’ ಸಿನಿಮಾದಲ್ಲಿ ಶ್ರೀ ಮುರಳಿಗೆ ಜೋಡಿಯಾಗಿದ್ದರು. ಈಗ ‘ಭರಾಟೆ’ಯಲ್ಲಿ ಸ್ಟಾರ್ ನಟಿಯಾಗಿಯೇ ಒಂದು ಹಾಡಿನಲ್ಲಿ ನಾಯಕ ಶ್ರೀ ಮುರಳಿ ಮತ್ತು ಶ್ರೀಲೀಲಾ ಜತೆಗೆ ಹೆಜ್ಜೆ ಹಾಕಲಿದ್ದಾರೆ.

ಇಂದಿನಿಂದ ನೆಲಮಂಗಲ ಬಳಿ ಹಾಡಿನ ಚಿತ್ರೀಕರಣ ನಡೆಯಲಿದೆ. ಹಾಡಿನ ದೃಶ್ಯವೊಂದಕ್ಕೆ ಸ್ಟಾರ್ ನಟಿಯೊಬ್ಬರ ಅಗತ್ಯವಿತ್ತು. ಅದಕ್ಕೆ ರಚಿತಾ ಬಳಿ ಕೇಳಿದಾಗ ಖುಷಿಯಿಂದಲೇ ಒಪ್ಪಿಕೊಂಡರು ಎಂದು ನಿರ್ದೇಶಕ ಚೇತನ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments