Publish Date: Thu, 26 Sep 2019 (09:25 IST)
Updated Date: Thu, 26 Sep 2019 (09:27 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಕನ್ನಡದ ಕೋಟ್ಯಾಧಿಪತಿ ಕಾರ್ಯಕ್ರಮದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿರೂಪಕರಾಗಿರುವುದು ಎಲ್ಲರಿಗೂ ಗೊತ್ತೇ ಇದೆ.
ಆದರೆ ಈಗ ಈ ಕಾರ್ಯಕ್ರಮ ಕೊನೆಯ ಹಂತ ತಲುಪಿದ್ದು, ಕೋಟ್ಯಾಧಿಪತಿ ಕಾರ್ಯಕ್ರಮದ ಕೊನೆಯ ಸಂಚಿಕೆಯಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್ ಭಾಗವಹಿಸುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ವಿಶೇಷವೆಂದರೆ ಈ ಸಂಚಿಕೆಯಲ್ಲಿ ಪುನೀತ್ ಸ್ಪರ್ಧಿಯ ಸೀಟ್ ನಲ್ಲಿ ರಚಿತಾ ನಿರೂಪಕರ ಸೀಟ್ ನಲ್ಲಿ ಕುಳಿತಿರುವ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಆದರೆ ಒಂದೇ ಪ್ರಶ್ನೆಗೆ ಪುನೀತ್ ಸ್ಪರ್ಧಿಯ ಸೀಟ್ ನಲ್ಲಿ ಕುಳಿತಿದ್ದಾರೆ ಎನ್ನಲಾಗಿದೆ. ಉಳಿದಂತೆ ರಚಿತಾ ಕೊನೆಯ ಸಂಚಿಕೆಯಲ್ಲಿ ಒಳ್ಳೆಯ ಉದ್ದೇಶಕ್ಕಾಗಿ ಸ್ಪರ್ಧಿಯಾಗಿ ಭಾಗವಹಿಸಿದ್ದಾರೆ ಎನ್ನಲಾಗಿದೆ.