ಬೆಂಗಳೂರು: ಡಿಂಪಲ್ ಕ್ವೀನ್ ರಚಿತಾ ರಾಂ ಹೊಸ ಸಿನಿಮಾ ಶಬರಿಗೆ ನಿನ್ನೆ ಮುಹೂರ್ತ ಕಾರ್ಯಕ್ರಮ ನೆರವೇರಿದೆ.
ಗಾಲಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಮುಹೂರ್ತ ಕಾರ್ಯಕ್ರಮ ನೆರವೇರಿದ್ದು, ಇದು ರಚಿತಾ ರಾಂ ಅವರ 36 ನೇ ಸಿನಿಮಾವಾಗಿದೆ. ರಚಿತಾ ಜೊತೆಗೆ ರಘು ಮುಖರ್ಜಿ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.
ಇದು ಪಕ್ಕಾ ಥ್ರಿಲ್ಲರ್ ಸಿನಿಮಾವಾಗಿದ್ದು, ರಚಿತಾ ಶಬರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ವಿಶಿಷ್ಟ ಪೋಸ್ಟರ್ ನಿಂದ ಈ ಸಿನಿಮಾ ಕುತೂಹಲ ಕೆರಳಿಸಿದೆ. ಯುವ ನಿರ್ದೇಶಕ ನವೀನ್ ಶೆಟ್ಟಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಮಹಿಳಾ ಪ್ರಧಾನ ಸಿನಿಮಾ ಇದಾಗಿದೆ.