Select Your Language

Notifications

webdunia
webdunia
webdunia
webdunia

ರಾಧಿಕಾ ಕುಮಾರಸ್ವಾಮಿ ಅಭಿನಯದ ಭೈರಾದೇವಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

Radhika Kumaraswamy Cinema

Sampriya

ಬೆಂಗಳೂರು , ಮಂಗಳವಾರ, 17 ಸೆಪ್ಟಂಬರ್ 2024 (14:40 IST)
Photo Courtesy X
ನಟಿ ರಾಧಿಕಾ ಕುಮಾರಸ್ವಾಮಿ ಅಭಿನಯಿಸಿರುವ ಬಹುನಿರೀಕ್ಷಿತ ಸಿನಿಮಾ ಭೈರಾದೇವಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಅಕ್ಟೋಬರ್ 3ರಂದು ಸಿನಿಮಾ ತೆರೆಗೆ ಬರಲಿದೆ.ಈ ಸಿನಿಮಾವನ್ನು ಶಮಿಕ ಎಂಟರ್‌ಪ್ರೈಸಸ್ ಲಾಂಛನದಲ್ಲಿ ರಾಧಿಕಾ ಕುಮಾರಸ್ವಾಮಿಯವರೇ ನಿರ್ಮಾಣ ಮಾಡಿದ್ದಾರೆ.

ಈಗಾಗಲೇ ಸಿನಿಮಾ ಪ್ರಚಾರದಲ್ಲಿ ತೊಡಗಿರುವ ರಾಧಿಕಾ ಕುಮಾರಸ್ವಾಮಿ ಅವರು ಈಚೆಗೆ ಆಟೋ ಚಾಲನೆ ಮಾಡಿದ್ದು ವಿಶೇಷವಾಗಿತ್ತು.

ಶ್ರೀಜೈ ಅವರು ನಿರ್ದೇಶಿಸಿರುವ ಈ ಚಿತ್ರಕ್ಕೆ ರವಿರಾಜ್ ಹಾಗೂ ಯಾದವ್ ಅವರ ಸಹ ನಿರ್ಮಾಣವಿದೆ. ಚಿತ್ರದಲ್ಲಿ ರಮೇಶ್‌ ಅರವಿಂದ್‌ ಪೊಲೀಸ್‌ ಅಧಿಕಾರಿಯಾಗಿ ನಟಿಸಿದ್ದಾರೆ.

ಜೆ.ಎಸ್.ವಾಲಿ ಛಾಯಾಚಿತ್ರಗ್ರಹಣ, ಕೆ.ಕೆ.ಸೆಂಥಿಲ್ ಪ್ರಸಾದ್ ಸಂಗೀತ ನಿರ್ದೇಶನ ಹಾಗೂ ರವಿಚಂದ್ರನ್ ಅವರ ಸಂಕಲನ ಚಿತ್ರಕ್ಕಿದೆ. ರವಿಶಂಕರ್, ರಂಗಾಯಣ ರಘು ಸೇರಿದಂತೆ ದೊಡ್ಡ ತಾರಾ ಬಳಗವಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಏನೇ ಆದ್ರೂ ಪತಿ ದರ್ಶನ್ ಕೈ ಬಿಡುವವರಲ್ಲ ವಿಜಯಲಕ್ಷ್ಮಿ ಎನ್ನುವುದಕ್ಕೆ ಇದೇ ಸಾಕ್ಷಿ