Publish Date: Thu, 18 Feb 2021 (09:12 IST)
Updated Date: Thu, 18 Feb 2021 (09:14 IST)
ಬೆಂಗಳೂರು: ಅನಾರೋಗ್ಯದಿಂದಾಗಿ ಆಸ್ಪತ್ರೆ ಸೇರಿರುವ ನಟ, ನಿರ್ಮಾಪಕ ರಾಘವೇಂದ್ರ ರಾಜಕುಮಾರ್ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ.
ತೀವ್ರ ಬಳಲಿಕೆಯಿಂದಾಗಿ ಮೊನ್ನೆ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಅವರು ದಾಖಲಾಗಿದ್ದರು. ಅವರ ಆರೋಗ್ಯ ವಿಚಾರಿಸಲು ಶ್ರೀಮುರಳಿ, ಪುನೀತ್ ರಾಜಕುಮಾರ್ ದಂಪತಿ, ಶಿವರಾಜ್ ಕುಮಾರ್ ದಂಪತಿ ಆಗಮಿಸಿದ್ದರು. ಅವರ ಆರೋಗ್ಯ ಸುಧಾರಿಸುತ್ತಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಪುನೀತ್ ರಾಜಕುಮಾರ್ ಮಾಹಿತಿ ನೀಡಿದ್ದಾರೆ.