ಬೆಂಗಳೂರು: ಡ್ರಗ್ ಮಾಫಿಯಾಗೆ ಸಂಬಂಧಿಸಿದಂತೆ ಬಂಧಿತರಾಗಿರುವ ರಾಗಿಣಿ ದ್ವಿವೇದಿಯನ್ನು ಅವರಿರುವ ಸಾಂತ್ವನ ಕೇಂದ್ರದಲ್ಲಿ ಸಿಸಿಬಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ನಿನ್ನೆ ಬೆನ್ನು ನೋವಿನ ನೆಪ ಹೇಳಿ ವಿಚಾರಣೆ ತಪ್ಪಿಸಿಕೊಂಡಿದ್ದ ರಾಗಿಣಿಯನ್ನು ಇಂದು ವಿಚಾರಣೆಗೊಳಪಡಿಸಲಾಗುತ್ತಿದೆ. ಇನ್ನು, ವಿಚಾರಣೆ ವೇಳೆ ರಾಗಿಣಿ ನನಗೇನೂ ಗೊತ್ತಿಲ್ಲ. ಗೊತ್ತಿರುವಷ್ಟೂ ವಿಚಾರವನ್ನು ಈಗಾಗಲೇ ಹೇಳಿದ್ದೇನೆ ಎನ್ನುತ್ತಲೇ ಜಾರಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿದೆ.