Publish Date: Sun, 13 Sep 2020 (09:32 IST)
Updated Date: Sun, 13 Sep 2020 (09:34 IST)
ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣದಲ್ಲಿ ಬಂಧಿತರಾಗಿರುವ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಸಿಸಿಬಿ ಕಸ್ಟಡಿ ನಾಳೆಗೆ ಅಂತ್ಯವಾಗಲಿದೆ.
ಹೀಗಾಗಿ ಇಂದು ಸಿಸಿಬಿ ಪೊಲೀಸರು ಇವರಿಬ್ಬರಿಂದ ಹೆಚ್ಚಿನ ಮಾಹಿತಿ ಕಲೆ ಹಾಕಲು ತೀವ್ರ ವಿಚಾರಣೆ ನಡೆಸಲಿದ್ದಾರೆ. ಈಗಾಗಲೇ ಡ್ರಗ್ ಪೆಡ್ಲರ್ ವೀರೇನ್ ಖನ್ನಾ ಇಬ್ಬರೂ ನಟಿಯರು ತಾನು ಆಯೋಜಿಸುತ್ತಿದ್ದ ಡ್ರಗ್ ಪಾರ್ಟಿಗಳಲ್ಲಿ ಭಾಗವಹಿಸುತ್ತಿದ್ದುದಾಗಿ ಹೇಳಿಕೆ ನೀಡಿದ್ದಾನೆ. ಅಲ್ಲದೆ, ನಟಿಯರ ಮೊಬೈಲ್ ನಿಂದ ರಿಟ್ರೀವ್ ಮಾಡಲಾದ ದಾಖಲೆಗಳಲ್ಲಿ ಹಲವು ಸಾಕ್ಷ್ಯಗಳು ದೊರೆತಿವೆ ಎನ್ನಲಾಗಿದೆ. ಆದರೆ ಇಬ್ಬರೂ ನಟಿಯರು ಪೊಲೀಸರು ಕೇಳುವ ಯಾವುದೇ ಪ್ರಶ್ನೆಗಳಿಗೂ ಉತ್ತರಿಸದೇ ಅಸಹಕಾರ ನೀಡುತ್ತಿದ್ದಾರೆ ಎನ್ನಲಾಗಿದೆ.