Publish Date: Tue, 13 Jun 2017 (08:26 IST)
Updated Date: Tue, 13 Jun 2017 (08:27 IST)
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಪುನರಾರಂಭ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ಆಗಮಿಸಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಡಾ. ರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ್ದಾರೆ.
ಡಾ. ರಾಜ್ ನಿವಾಸಕ್ಕೆ ಆಗಮಿಸಿದ ರಾಹುಲ್ ಗಾಂಧಿ, ಇತ್ತೀಚೆಗೆ ಅಗಲಿದ ಡಾ. ರಾಜ್ ಪತ್ನಿ, ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಗೆ ನಮನ ಸಲ್ಲಿಸಿದರು.
ಡಾ.ರಾಜ್ ಮತ್ತು ಪಾರ್ವತಮ್ಮ ಫೋಟೋಗೆ ಪುಷ್ಪವಿರಿಸಿ ನಮಿಸಿದ ರಾಹುಲ್ ಗಾಂಧಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ರಾಹುಲ್ ಗಾಂಧಿಗೆ ಸಿಎಂ ಸಿದ್ಧರಾಮಯ್ಯ ಸಾಥ್ ನೀಡಿದರು. ಈ ವೇಳೆ ರಾಜ್ ಪುತ್ರರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಮತ್ತು ಪುನೀತ್ ರಾಜ್ ಕುಮಾರ್ ಸೇರಿದಂತೆ ಕುಟುಂಬ ಸದಸ್ಯರೆಲ್ಲರೂ ಉಪಸ್ಥಿತರಿದ್ದರು.