Webdunia - Bharat's app for daily news and videos

Install App

ಟೋಬಿ ಚೆನ್ನಾಗಿಲ್ಲ ಎಂದಿದ್ದಕ್ಕೆ ಯುವತಿಗೆ ನಿಂದನೆ: ತಪ್ಪಿಲ್ಲದಿದ್ದರೂ ಕ್ಷಮೆ ಕೇಳಿದ ರಾಜ್ ಬಿ ಶೆಟ್ಟಿ

Webdunia
ಶನಿವಾರ, 26 ಆಗಸ್ಟ್ 2023 (17:44 IST)
ಬೆಂಗಳೂರು: ನಿನ್ನೆಯಷ್ಟೇ ಬಿಡುಗಡೆಯಾದ ರಾಜ್ ಬಿ ಶೆಟ್ಟಿ ನಾಯಕರಾಗಿರುವ ಟೋಬಿ ಸಿನಿಮಾ ಚೆನ್ನಾಗಿಲ್ಲ ಎಂದು ಥಿಯೇಟರ್ ಎದುರು ಹೇಳಿದ ಯುವತಿಗೆ ಯುವಕನೊಬ್ಬ ಅಶ್ಲೀಲ ಶಬ್ಧಗಳಿಂದ ನಿಂದಿಸಿದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಸಿನಿಮಾ ಚೆನ್ನಾಗಿಲ್ಲ ಅಂತ ನೀನು ಏನು ಹೇಳೋದು, ಏನು ಚೆನ್ನಾಗಿಲ್ಲ. ಇಷ್ಟ ಇದ್ರೆ ನೋಡು, ಇಲ್ಲಾಂದ್ರೆ ಹೋಗ್ತಾ ಇರು ಎಂದು ಅಶ್ಲೀಲ ಶಬ್ಧದಲ್ಲಿ ಅಭಿಮಾನಿ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಏರು ಧ್ವನಿಯಲ್ಲಿ ನಿಂದಿಸಿದ್ದಾನೆ.

ಈ ವಿಡಿಯೋ ನೋಡಿ ನಟ ರಾಜ್ ಬಿ ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ. ‘ಈ ವಿಡಿಯೋದಲ್ಲಿರುವ ವ್ಯಕ್ತಿ ನಮ್ಮ ಸಿನಿಮಾ ತಂಡದವರಲ್ಲ. ಹಾಗಿದ್ದರೂ ಆ ವಿಡಿಯೋದಲ್ಲಿರುವ ಯುವತಿ ಅನುಭವಿಸಿದ ಕಿರುಕುಳಕ್ಕೆ ನಾನು ಕ್ಷಮೆ ಕೇಳುತ್ತೇನೆ. ಸಿನಿಮಾ ಎನ್ನುವುದು ವಿಮರ್ಶೆಗೊಳಪಡುವ ಮಾಧ್ಯಮ. ಚೆನ್ನಾಗಿದೆ ಅಥವಾ ಚೆನ್ನಾಗಿಲ್ಲ ಎನ್ನುವ ಅಭಿಪ್ರಾಯವನ್ನು ಹೇಳುವ ಸ್ವಾತಂತ್ರ್ಯ ನಮಗಿದೆ. ಇದಕ್ಕಾಗಿ ಯಾರೂ ಯಾರನ್ನೂ ಪೀಡಿಸಬಾರದು’ ಎಂದು ಸೋಷಿಯಲ್ ಮೀಡಿಯಾ ಮೂಲಕವೇ ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸಿದ್ದರಾಮಯ್ಯರನ್ನು ದಿಢೀರ್ ಭೇಟಿಯಾದ ತೆಲುಗು ನಟ ರಾಮ್‌ ಚರಣ್‌

ಬರ್ತ್‌ಡೇಗೂ ಮುನ್ನ ಮೈಸೂರಿನಲ್ಲಿ ಚಾಮುಂಡಿ ತಾಯಿಯ ಆಶೀರ್ವಾದ ಪಡೆದ ಕಿಚ್ಚ ಸುದೀಪ್

ಅಮ್ಮನ ಹುಟ್ಟುಹಬ್ಬಕ್ಕೆ ಹೊಸ ಯೋಜನೆ ಕೈಗೊಂಡ ನಟ ಕಿಚ್ಚ ಸುದೀಪ್

ಗಂಡನ ಕೈಚಳಕದಲ್ಲೇ ಸೆರೆಯಾಗಲಿದೆ ಬಿಗ್‌ಬಾಸ್ ಖ್ಯಾತಿಯ ಗೌತಮಿ ಜಾಧವ್ ಮುಂದಿನ ಸಿನಿಮಾ‌‌

ಕಿಚ್ಚ ಸುದೀಪ್ ಬರ್ತ್ ಡೇ ಹಿಂದಿನ ದಿನ ಇಲ್ಲಿ ಅಭಿಮಾನಿಗಳಿಗೆ ಸಿಗ್ತಾರೆ

ಮುಂದಿನ ಸುದ್ದಿ
Show comments