ಪುನೀತ್​ಗೆ ಸಂಗೀತದ ನುಡಿನಮನ ಸಲ್ಲಿಸಿದ ರಾಜೇಶ್ ಕೃಷ್ಣನ್

Webdunia
ಮಂಗಳವಾರ, 9 ನವೆಂಬರ್ 2021 (15:31 IST)
ದಾವಣಗೆರೆ : ಪುನೀತ್ ರಾಜ್​ಕುಮಾರ್​ಗೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ನುಡಿನಮನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಹೊನ್ನಾಳಿ ಪಟ್ಟಣದಲ್ಲಿ ನಿನ್ನೆ (ನವೆಂಬರ್ 8) ತಡರಾತ್ರಿ ವರೆಗೆ ನುಡಿನಮನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ತಮ್ಮ ಮಧುರ ಸಂಗೀತದ ಮೂಲಕ ಗಾಯಕ ರಾಜೇಶ್ ಕೃಷ್ಣನ್, ಅಪ್ಪುಗೆ ನುಡಿನಮನ ಸಲ್ಲಿಸಿದರು. ಶಾಸಕ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪುನೀತ್ ನುಡಿನಮನ ಕಾರ್ಯಕ್ರಮದಲ್ಲಿ ರೇಣುಕಾಚಾರ್ಯ ಕುಟುಂಬದ 62 ಜನರು ನೇತ್ರದಾನಕ್ಕೆ ನಿರ್ಧಾರ ಮಾಡಿದರು. ಜತೆಗೆ ಶಾಸಕರಿಗೆ ಅವಳಿ ತಾಲೂಕಿನ 500 ಜನರು ಸಾಥ್ ನೀಡಿದ್ದು, ನೇತ್ರದಾನಕ್ಕೆ ಕೈಜೋಡಿಸಿದ್ದಾರೆ.
ಮುಂದಿನ ದಿನಗಳಲ್ಲಿ ಅವಳಿ ತಾಲೂಕಿನಲ್ಲಿ ಐದು ಸಾವಿರ ಜನರು ನೇತ್ರಾದಾನ ಮಾಡಿಸಲು ಸಚಿವ ರೇಣುಕಾಚಾರ್ಯರು ಸಂಕಲ್ಪ ಮಾಡಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ನೇತ್ರದಾನದಿಂದ ಪ್ರೇರಣೆಗೊಂಡ ರೇಣುಕಾಚಾರ್ಯ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಿದ್ದಾರೆ.
ಹೊನ್ನಾಳಿಯಲ್ಲಿ ನಟ ಪುನೀತ್‌ಗೆ ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ನೇತ್ರದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ವಿಶೇಷ ನಮನ ಸಲ್ಲಿಸಲಾಯಿತು. ಇದೇ ಕಾರ್ಯಕ್ರಮದಲ್ಲಿ ಹಿರಿಯ ನಟ ಹೊನ್ನವಳ್ಳಿ ಕೃಷ್ಣ ಹಾಗೂ ಟೆನ್ನಿಸ್ ಕೃಷ್ಣ ಭಾಗಿಯಾಗಿ ಪುನೀತ್ ಜೊತೆ ಕೆಲಸ ಮಾಡಿದ ನೆನಪುಗಳನ್ನು ಮೆಲುಕು ಹಾಕಿದರು. ಇದೇ ವೇಳೆ ಗಾಯಕ ರಾಜೇಶ್ ಕೃಷ್ಣನ್ ಸೇರಿದಂತೆ ನೂರಾರು ಜನ ನೇತ್ರದಾನದ ಪತ್ರಕ್ಕೆ ಸಹಿ ಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿರಡಿ ಸಾಯಿಬಾಬಾಗೆ ಕೊಡುಗೆ ನೀಡಿ, ಕಾರಣ ಬಿಚ್ಚಿಟ್ಟ ಕನಸಿನ ರಾಣಿ ಮಾಲಾಶ್ರೀ

ದರ್ಶನ್ ಜೈಲಿನಲ್ಲಿ ಹಲ್ಲೆ ಮಾಡಿದ್ದು ನಿಜಾನಾ: ಪತ್ನಿ ವಿಜಯಲಕ್ಷ್ಮಿ ಹೇಳಿದ್ದೇನು

ಬಂಧನಕ್ಕೊಳಗಾದ ನೀಲಿ ತಾರೆ, ಓನ್ಲಿ ಫ್ಯಾನ್ಸ್ ಸ್ಟಾರ್ ಬೋನಿ, ಆರೋಪ ಸಾಬೀತಾದಲ್ಲಿ 15ವರ್ಷ ಜೈಲೂಟ

ಮಗುವಿನ ಆಗಮನದ ಖುಷಿಯಲ್ಲಿ ಪ್ಯಾಟೆ ಹುಡುಗಿ ಹಳ್ಳಿ ಲೈಫ್‌ನ ಸುಷ್ಮಾ ರಾಜ್‌

ರಿಷಬ್ ಕಾಲ ಮೇಲೆ ಮಲಗಿದ್ದು ದೈವವಲ್ಲ ಬದಲಾಗಿ ನರ್ತಕ, ಭಾರೀ ಟೀಕೆ

ಮುಂದಿನ ಸುದ್ದಿ
Show comments