Publish Date: Sun, 27 Dec 2020 (16:35 IST)
Updated Date: Sun, 27 Dec 2020 (16:36 IST)
ಹೈದರಾಬಾದ್: ರಕ್ತದೊತ್ತಡ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸೂಪರ್ ಸ್ಟಾರ್ ರಜನೀಕಾಂತ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮೊನ್ನೆಯಷ್ಟೇ ಅವರು ಹೈದರಾಬಾದ್ ನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಕಾರಣ, ವೈದ್ಯರು ಅವರನ್ನು ಡಿಸ್ಚಾರ್ಜ್ ಮಾಡಿದ್ದಾರೆ. ಬಳಿಕ ಅಪೋಲೋ ಆಸ್ಪತ್ರೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದೆ. ಈಗ ಅವರ ಆರೋಗ್ಯ ಸುಧಾರಿಸಿದೆ. ಆದರೆ ಮುಂದಿನ ಒಂದು ವಾರ ಅವರು ಸಂಪೂರ್ಣ ಬೆಡ್ ರೆಸ್ಟ್ ಮಾಡಬೇಕಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ. ಅಷ್ಟೇ ಅಲ್ಲ, ಒತ್ತಡಕ್ಕೊಳಗಾಗುವಂತ ಕೆಲಸ, ಚಟುವಟಿಕೆಯಲ್ಲಿ ಭಾಗಿಯಾಗಬಾರದು ಎಂದಿದ್ದಾರೆ.