Webdunia - Bharat's app for daily news and videos

Install App

ಆಸ್ಪತ್ರೆಯಿಂದ ಮನೆಗೆ ಬಂದ ರಜನಿಕಾಂತ್‌ ಮೊದಲ ಪೋಸ್ಟ್‌: ನರೇಂದ್ರ ಮೋದಿ, ಅಮಿತಾಬ್‌ಗೆ ಕೃತಜ್ಞತೆ

Sampriya
ಶನಿವಾರ, 5 ಅಕ್ಟೋಬರ್ 2024 (14:26 IST)
ಚೆನ್ನೈ: ನಾನು ಬೇಗ ಗುಣಮುಖರಾಗಲಿ ಎಂದು ಹಾರೈಸಿದ ನನ್ನ ಎಲ್ಲಾ ರಾಜಕೀಯ ಮಿತ್ರರಿಗೆ, ನನ್ನ ಎಲ್ಲಾ ಚಿತ್ರರಂಗದ ಗೆಳೆಯರಿಗೆ, ನನ್ನ ಎಲ್ಲಾ ಹಿತೈಷಿಗಳಿಗೆ, ಪತ್ರಿಕಾ ಮತ್ತು ಮಾಧ್ಯಮದವರಿಗೆ, ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಧನ್ಯವಾದಗಳು ಎಂದು  ಸೂಪರ್‌ಸ್ಟಾರ್‌ ರಜನಿಕಾಂತ್‌ ಕೃತಜ್ಞತೆ ಸಲ್ಲಿಸಿದ್ದಾರೆ.

ನೆಚ್ಚಿನ ನಟ ಬೇಗ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಆಗಲಿ ಎಂದು ಪ್ರಾರ್ಥಿಸಿದ ಅಭಿಮಾನಿಗಳು ಮತ್ತು ಆತ್ಮೀಯರಿಗೆ  ರಜನಿಕಾಂತ್‌ ಧನ್ಯವಾದ ಸಲ್ಲಿಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಅವರು, ನನ್ನ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ, ಪ್ರೀತಿಯ ಗೌರವಾನ್ವಿತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೀ ಹೃತ್ಪೂರ್ವಕ ಧನ್ಯವಾದಗಳು. ಅಮಿತಾಬ್‌ ಬಚ್ಚನ್‌ ಅವರ ಪ್ರೀತಿ, ಕಾಳಜಿಗೆ ನನ್ನ ಹೃದಯ ಸ್ಪರ್ಶಿಸಿದೆ ಎಂದಿದ್ದಾರೆ.

ನನ್ನನ್ನು ಪ್ರೀತಿಸುವ, ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿದ ನಿಮ್ಮೆಲ್ಲರಿಗೂ ನನ್ನ ಪ್ರಾಮಾಣಿಕ ಕೃತಜ್ಞತೆ ಎಂದು ತಿಳಿಸಿದ್ದಾರೆ.

ಅನಾರೋಗ್ಯದ ಕಾರಣ ರಜನಿಕಾಂತ್ ಅವರನ್ನು ಸೆ.30 ರಂದು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಟ್ರಾನ್ಸ್‌ಕ್ಯಾಥೆಟರ್ ವಿಧಾನವನ್ನು ಬಳಸಿ ಚಿಕಿತ್ಸೆ ನೀಡಲಾಯಿತು.  ಅವರು ಚೇತರಿಸಿಕೊಂಡು ಮನೆಗೆ ಬಂದಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸಿದ್ದರಾಮಯ್ಯರನ್ನು ದಿಢೀರ್ ಭೇಟಿಯಾದ ತೆಲುಗು ನಟ ರಾಮ್‌ ಚರಣ್‌

ಬರ್ತ್‌ಡೇಗೂ ಮುನ್ನ ಮೈಸೂರಿನಲ್ಲಿ ಚಾಮುಂಡಿ ತಾಯಿಯ ಆಶೀರ್ವಾದ ಪಡೆದ ಕಿಚ್ಚ ಸುದೀಪ್

ಅಮ್ಮನ ಹುಟ್ಟುಹಬ್ಬಕ್ಕೆ ಹೊಸ ಯೋಜನೆ ಕೈಗೊಂಡ ನಟ ಕಿಚ್ಚ ಸುದೀಪ್

ಗಂಡನ ಕೈಚಳಕದಲ್ಲೇ ಸೆರೆಯಾಗಲಿದೆ ಬಿಗ್‌ಬಾಸ್ ಖ್ಯಾತಿಯ ಗೌತಮಿ ಜಾಧವ್ ಮುಂದಿನ ಸಿನಿಮಾ‌‌

ಕಿಚ್ಚ ಸುದೀಪ್ ಬರ್ತ್ ಡೇ ಹಿಂದಿನ ದಿನ ಇಲ್ಲಿ ಅಭಿಮಾನಿಗಳಿಗೆ ಸಿಗ್ತಾರೆ

ಮುಂದಿನ ಸುದ್ದಿ
Show comments