Publish Date: Sun, 25 Nov 2018 (11:12 IST)
Updated Date: Sun, 25 Nov 2018 (11:16 IST)
ಬೆಂಗಳೂರು : ರೆಬಲ್ ಸ್ಟಾರ್ ಅಂಬರೀಶ್ ನಿಧನ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿರುವ ರಜನಿಕಾಂತ್ ಅಂಬರೀಶ್ ಅವರ ಅಂತಿಮ ದರ್ಶನ ಪಡೆದಿದ್ದಾರೆ.
ಕಂಠೀರವ ಕ್ರೀಡಾಂಗಣದಲ್ಲಿ ಅಂಬರೀಶ್ ಅವರ ಪಾರ್ಥೀವ ಶರೀರ ತರಲಾಗಿದ್ದು, ಇಂದು ಇಡೀ ದಿನ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ.
ಚೆನ್ನೈ ಯಿಂದ ನೇರವಾಗಿ ಕಂಠೀರವ ಸ್ಟೇಡಿಯಂಗೆ ಆಗಮಿಸಿದ ರಜನಿಕಾಂತ್ ಅಂಬರೀಶ್ ಗೆ ಅಂತಿಮ ನಮನ ಸಲ್ಲಿಸಿದರು. ಈ ವೇಳೆ ತಮ್ಮ ಗೆಳೆಯ ಅಂಬರೀಶ್ ಅವರನ್ನು ನೆನೆದು ಕಣ್ಣೀರಿಟ್ಟರು. ಸುಮಲತಾ ಅಂಬರೀಶ್ ಅವರಿಗೆ ರಜನಿಕಾಂತ್ ಸಾಂತ್ವನ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.