Publish Date: Thu, 07 Jun 2018 (10:51 IST)
Updated Date: Thu, 07 Jun 2018 (10:55 IST)
ಬೆಂಗಳೂರು: ಸೂಪರ್ ಸ್ಟಾರ್ ರಜನೀಕಾಂತ್ ಅಭಿನಯದ ಕಾಲಾ ಚಿತ್ರ ವ್ಯಾಪಕ ವಿರೋಧದ ನಡುವೆಯೂ ಇಂದು ಕರ್ನಾಟಕದಲ್ಲಿ ತೆರೆ ಕಾಣಬೇಕಿತ್ತು. ಆದರೆ ಹಲವೆಡೆ ಕನ್ನಡ ಪರ ಸಂಘಟನೆಗಳ ಹೋರಾಟದಿಂದಾಗಿ ಪ್ರದರ್ಶನ ಸ್ಥಗಿತಗೊಂಡಿದೆ.
ಬೆಂಗಳೂರಿನ ಬಹುತೇಕ ಎಲ್ಲಾ ಚಿತ್ರಮಂದಿರಗಳಲ್ಲಿ ಇಂದು ಪ್ರದರ್ಶನವಿಲ್ಲ. ಮಂತ್ರಿ ಮಾಲ್ ಸಿನಿಮಾ ಮಂದಿರದಲ್ಲಿ ಚಿತ್ರ ವೀಕ್ಷಣೆಗೆ ಬಂದಿದ್ದ ರಜನಿ ಅಭಿಮಾನಿಗಳಿಗೆ ಸ್ವತಃ ಪೊಲೀಸರೇ ಸ್ಥಳ ಬಿಟ್ಟು ತೆರಳುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.
ಆದರೆ ಮಂಗಳೂರಿನಲ್ಲಿ ಮಧ್ಯಾಹ್ನ 12.45 ಕ್ಕೆ ಕಾಲಾ ಮೊದಲ ಪ್ರದರ್ಶನ ಕಾಣಲಿದ್ದು, ಈಗಾಗಲೇ ಟಿಕೆಟ್ ಸೋಲ್ಡ್ ಔಟ್ ಆಗಿದೆ. ಕರ್ನಾಟಕದ ಉತ್ತರ ಭಾಗದಲ್ಲೂ ಹಲವೆಡೆ ಚಿತ್ರಪ್ರದರ್ಶನ ರದ್ದುಗೊಳಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.