Select Your Language

Notifications

webdunia
webdunia
webdunia
webdunia

ನಾಡದೇವಿ ಭಕ್ತರಲ್ಲಿ ಕ್ಷಮೆಯಾಚಿಸಿದ ರಕ್ಷಕ್ ಬುಲೆಟ್‌

Rakshak Bullet, Chamundeshwari Temple, Zee Kannada,

Sampriya

ಬೆಂಗಳೂರು , ಗುರುವಾರ, 27 ಮಾರ್ಚ್ 2025 (15:46 IST)
Photo Courtesy X
ನಾಡದೇವಿ ಚಾಮುಂಡೇಶ್ವರಿಗೆ ಅವಮಾನ ಮಾಡಿದ್ದಾರೆಂದು ಬಿಗ್‌ಬಾಸ್ ಸ್ಪರ್ಧಿ ರಕ್ಷಕ್ ಬುಲೆಟ್ ಮೇಲೆ ಆಕ್ರೋಶ ಹೊರಬೀಳುತ್ತಿದ್ದ ಹಾಗೇ ದೇವಿ ಆರಾಧಕರ ಬಳಿ  ರಕ್ಷಕ್ ಕ್ಷಮೆಯಾಚಿಸಿದ್ದಾರೆ. ಯಾರಿಗಾದರೂ ಬೇಸರವಾಗಿದ್ದಲ್ಲಿ ನಾನು ಕ್ಷಮೆಯಾಚಿಸುತ್ತೇನೆ. ಮುಂದೆ ಇಂತಹ ಆಚಾತುರ್ಯ ನಡೆಯೋದಿಲ್ಲ ಎಂದು ಪೋಸ್ಟ್ ಹಾಕಿ ಬರೆದುಕೊಂಡಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ನಟ ಪೋಸ್ಟ್ ಮಾಡಿ ನಾನು ನಿಮ್ಮ ರಕ್ಷಕ್ ಬುಲೆಟ್, ಇತ್ತೀಚೆಗೆ ಒಂದು ರಿಯಾಲಿಟಿ ಶೋನಲ್ಲಿ ನಾನು ಒಂದು ಹೆಸರಾಂತ ಚಿತ್ರದ ಡೈಲಾಗ್ ಅನ್ನು ಒಂದು ಸ್ಕಿಟ್‌ನಲ್ಲಿ ಹೇಳಿದ್ದೆ, ಅದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ನನ್ನ ತಂದೆಯವರಾದ ದಿವಂಗತ ಬುಲೆಟ್ ಪ್ರಕಾಶ್ ಅವರು ನನ್ನ ತಾಯಿ ಹಾಗೂ ಕುಟುಂಬಸ್ಥರು ಪರಮ ಭಕ್ತರು. ನಮ್ಮ ತಂದೆಯವರು ಇದ್ದಾಗಿನಿಂದಲೂ ನಾವು ತಾಯಿ ಚಾಮುಂಡೇಶ್ವರಿಗೆ ಪೂಜೆ ಮಾಡುತ್ತಾ ನಡೆದುಕೊಂಡು ಬಂದಿದ್ದೇವೆ.

ನಾವು ಉದ್ದೇಶಪೂರ್ವಕವಾಗಿ ತಾಯಿ ಚಾಮುಂಡೇಶ್ವರಿ ಬಗ್ಗೆ ಹೇಳುವಷ್ಟು ದೊಡ್ಡವನಲ್ಲ. ಆ ತಾಯಿಯ ಆಶೀರ್ವಾದದಿಂದ ನಾನು ಬೆಳೆಯುತ್ತಿದ್ದೇನೆ. ನಾನು ಯಾವುದೇ ಕಾರ್ಯ ಪ್ರಾರಂಭಿಸಬೇಕಾದರೆ ಮೊದಲು ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ನಂತರ ಕೆಲಸವನ್ನು ಆರಂಭಿಸುತ್ತೇನೆ. ನಾನು ಭಕ್ತಾಧಿಗಳ ಭಾವನೆಗಳಿಗಾಗಲಿ ಮನಸ್ಸಿಗಾಗಲಿ ನೋವುಂಟು ಮಾಡುವ ಕೆಲಸ ಮಾಡುವುದಿಲ್ಲ. ಯಾರಿಗಾದರೂ ಬೇಸರವಾಗಿದ್ದಲ್ಲಿ ನಾನು ಕ್ಷಮೆಯಾಚಿಸುತ್ತೇನೆ. ಮುಂದೆ ಇಂತಹ ಆಚಾತುರ್ಯ ನಡೆಯೋದಿಲ್ಲ ಎಂದು ರಕ್ಷಕ್ ಕ್ಷಮೆಯಾಚಿಸಿದ್ದಾರೆ.

ಜೀ ಕನ್ನಡದ ರಿಯಾಲಿಟಿ ಶೋವೊಂದರಲ್ಲಿ ರಕ್ಷಕ್‌ ಸ್ಕಿಟ್‌ವೊಂದರಲ್ಲಿ ತಾಯಿ ಚಾಮುಂಡೇಶ್ವರಿ ವಿಚಾರ ಸಂಬಂಧ ಹೇಳಿದ್ದ ಡೈಲಾಗ್ ವಿವಾದಕ್ಕೆ ಕಾರಣವಾಗಿತ್ತು. ಇದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿತ್ತು. ಹಿಂದೂ ಪರ ಹೋರಾಟಗಾರರು ರಕ್ಷಕ್‌ ಬುಲೆಟ್‌ ಹೇಳಿಕೆಗೆ ಭಾರೀ ವಿರೋಧ ವ್ಯಕ್ತಪಿಡಿಸಿದ್ದರು. ಅದಲ್ಲದೆ ಕಾನೂನು ಹೋರಾಟದ ಎಚ್ಚರಿಕೆಯೂ ನೀಡಿದ್ದರು.

ಇದೀಗ ರಕ್ಷಕ್ ಕ್ಷಮೆಯಾಚಿಸಿ ಪೋಸ್ಟ್ ಹಂಚಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾಡದೇವತೆಗೆ ಅವಮಾನ: ಕೊನೆಗೂ ಕ್ಷಮೆ ಕೇಳಿದ ರಕ್ಷಕ್ ಬುಲೆಟ್