ಕನ್ನಡದ ಸಿಂಪಲ್ ಸ್ಟಾರ್, 777ಚಾರ್ಲಿ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿದ್ದ ರಕ್ಷಿತ್ ಶೆಟ್ಟೆ ಸದ್ಯ ಅನೇಕ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ರಕ್ಷಿತ್ ಬಗ್ಗೆ ಮತ್ತೊಂದು ಇಂಟ್ರಸ್ಟಿಂಗ್ ಸುದ್ದಿ ವೈರಲ್ ಆಗಿದೆ. ಕಾಲಿವುಡ್ ಅಂಗಳದಲ್ಲಿ ಈಗ ರಕ್ಷಿತ್ ಶೆಟ್ಟಿದೇ ಸದ್ದು. ಸಿಂಪಲ್ ಸ್ಟಾರ್ ಕಾಲಿವುಡ್ ಸಿನಿಮಾರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ ಎನ್ನಲಾಗಿದೆ. ಕಾಲಿವುಡ್ ಸ್ಟಾರ್ ವಿಜಯ್ ದಳಪತಿ ನಟನೆಯ ಮುಂದಿನ ಸಿನಿಮಾದಲ್ಲಿ ನಟಿಸುವ ಮೂಲಕ ರಕ್ಷಿತ್ ಶೆಟ್ಟಿ ತಮಿಳು ಸಿನಿಮಾರಂಗದಲ್ಲಿ ಮಿಂಚಲಿದ್ದಾರೆ ಎನ್ನಲಾಗಿದೆ. ವಿಜಯ್ ನಟನೆಯ ದಳಪತಿ 67 (ತಾತ್ಕಾಲಿಕ ಹೆಸರು) ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದೆ. ಖ್ಯಾತ ನಿರ್ದೇಶಕ ಲೋಕೇಶ್ ಕನಗರಾಜ್ ಜೊತೆ ದಳಪತಿ ವಿಜಯ್ ಮುಂದಿನ ಸಿನಿಮಾ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ದೊಡ್ಡ ಸ್ಟಾರ್ ಕಾಸ್ಟ್ ಇರಲಿದೆ ಎನ್ನುವ ಮಾತು ಕಾಲಿವುಡ್‌ನಲ್ಲಿ ಗುಲ್ಲಾಗಿದೆ. ವಿಜಯ್ ಸದ್ಯ ವಾರಿಸು ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಇದೀಗ ರಶ್ಮಿಕಾ ಬಳಿಕ ವಿಜಯ್ ಸಿನಿಮಾದಲ್ಲಿ ರಕ್ಷಿತ್ ನಟಿಸಲಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.