ಬಂಧನದ ಭೀತಿಯಲ್ಲಿ ಕೋರ್ಟ್ ಮೆಟ್ಟಿಲೇರಿದ ರಕ್ಷಿತ್ ಶೆಟ್ಟಿ

Sampriya
ಶನಿವಾರ, 20 ಜುಲೈ 2024 (18:10 IST)
Photo Courtesy X
ಬೆಂಗಳೂರು: ಅನುಮತಿಯಿಲ್ಲದೆ ಹಾಡುಗಳನ್ನು ಬಳಸಿದ ಆರೋಪದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ ಅವರು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಕಾಪಿ ರೈಟ್ಸ್ ಉಲ್ಲಂಘನೆ ಆರೋಪ ಹೊತ್ತಿರುವ ರಕ್ಷಿತ್ ಶೆಟ್ಟಿ ಅವರಿಗೆ ಬಂಧನ ಭೀತಿ ಎದುರಾಗಿದೆ. ಇದರ ಬೆನ್ನಲ್ಲೇ ರಕ್ಷಿತ್  ಇದೀಗ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ರಕ್ಷಿತ್ ಶೆಟ್ಟಿ ಅವರ ನಿರ್ಮಾಣದ ಸಿನಿಮಾಗೆ ಅನುಮತಿಯಿಲ್ಲದೆ ಎರಡು ಹಾಡನ್ನು ಬಳಸಿದ್ದಕ್ಕೆ ಅವರ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಅದರಂತೆ ರಕ್ಷಿತ್ ಶೆಟ್ಟಿ ಮತ್ತು ಅವರ ನಿರ್ಮಾಣ ಸಂಸ್ಥೆ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ನಿರೀಕ್ಷಣಾ ಜಾಮೀನು ಕೋರಿ ರಕ್ಷಿತ್ ಶೆಟ್ಟಿ ಬೆಂಗಳೂರಿನ ಸೆಷನ್ಸ್ ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ನ್ಯಾಯ ಎಲ್ಲಿದೆ ಸಾಂಗ್ ಕಾಪಿ ರೈಟ್ಸ್ ಉಲ್ಲಂಘನೆ ಆರೋಪ ಇವರ ಮೇಲಿದೆ. ಬ್ಯಾಚಲರ್ಸ್ ಪಾರ್ಟಿ ಸಿನಿಮಾಗಾಗಿ ಅನಧಿಕೃತವಾಗಿ ಆ ಹಾಡನ್ನು ರಕ್ಷಿತ್ ಶೆಟ್ಟಿ ಒಡೆತನದ ನಿರ್ಮಾಣ ಸಂಸ್ಥೆ ಬಳಕೆ ಮಾಡಿಕೊಂಡಿತ್ತು.

ಪರಮವಾ ಸ್ಟೂಡಿಯೋಸ್ ಮತ್ತು ರಕ್ಷಿತ್ ಶೆಟ್ಟಿ ಮೇಲೆ ಎಫ್ ಐ ಆರ್ ದಾಖಲಾಗುತ್ತಿದ್ದಂತೆ ಸೋಷಿಯಲ್ ಮೀಡಿಯಾ ಮೂಲಕ ಪ್ರತಿಕ್ರಿಯೆ ಕೂಡ ನೀಡಿದ್ದರು. ರಕ್ಷಿತ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಲಾಗಿದ್ದು, ವಿಚಾರಣೆಯನ್ನು ಜುಲೈ 24 ಕ್ಕೆ ಸೆಷನ್ಸ್ ಕೋರ್ಟ್ ಮುಂದೂಡಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾ ಸಕ್ಸಸ್ ಖುಷಿ ಮಧ್ಯೆ ದಿಢೀರ್ ಎಚ್ ಡಿ ದೇವೇಗೌಡರನ್ನು ಭೇಟಿಯಾದ ರಿಷಬ್

BBK12: ರಕ್ಷಿತಾಗೆ ಈಡಿಯಟ್ ಎಂದ ಅಶ್ವಿನಿ: ನಟ್ಟು ಬೋಲ್ಟ್ ಟೈಟ್ ಮಾಡಿ ಎಂದ ನೆಟ್ಟಿಗರು: video

ಕಾಮಿಡಿ ಕಿಲಾಡಿಗಳಿಂದಲೂ ಮಾಸ್ಟರ್ ಆನಂದ್ ಹೊರಬಂದ್ರಾ

ಸುಹಾನಾ ಸಯ್ಯದ್ ಮದುವೆ ಡೇಟ್ ಫಿಕ್ಸ್‌, ಸರಳ ವಿವಾಹವಾಗಲಿದ್ದಾರೆ ಗಾಯಕಿ

ಗರ್ಭಾವಸ್ಥೆಯ ಬಗ್ಗೆ ಸೋನಾಕ್ಷಿ ಸಿನ್ಹಾಗೆ ಎಲ್ಲರ ಮುಂದೆಯೇ ಕಾಲೆಳೆದ ಪತಿ ಜಹೀರ್ ಇಕ್ಬಾಲ್‌

ಮುಂದಿನ ಸುದ್ದಿ
Show comments