ರಕ್ಷಿತ್, ರಿಷಬ್, ರಾಜ್ ಬಿ ಶೆಟ್ಟಿ ಉತ್ತರ ಕರ್ನಾಟಕದ ಕತೆಗಳನ್ನು ಸಿನಿಮಾ ಮಾಡಲ್ಲ ಯಾಕೆ?

Webdunia
ಶನಿವಾರ, 5 ಆಗಸ್ಟ್ 2023 (08:50 IST)
ಬೆಂಗಳೂರು: ರಾಜ್ ಬಿ ಶೆಟ್ಟಿಯವರ ಟೋಬಿ ಸಿನಿಮಾ ಟ್ರೈಲರ್ ಲಾಂಚ್  ವೇಳೆ ಮಾತನಾಡಿರುವ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ತಾವ್ಯಾಕೆ ಉತ್ತರ ಕರ್ನಾಟಕದ ಕತೆಗಳನ್ನು ತೆರೆ ಮೇಲೆ ತರೋದಿಲ್ಲ ಎಂದು ಹೇಳಿದ್ದಾರೆ.

ಕನ್ನಡ ಸಿನಿಮಾ ರಂಗದಲ್ಲಿ ಇಂದು ರಾಜ್, ರಿಷಬ್, ರಕ್ಷಿತ್ ಎಂಬ ತ್ರಿಬಲ್ ಆರ್ ನದ್ದೇ ಹವಾ. ಇವರ ಸಿನಿಮಾಗಳು ಕರಾವಳಿ ಭಾಗಕ್ಕೆ ಸಂಬಂಧಿಸಿದ ಕತೆ, ಅಲ್ಲಿನ ಭಾಷೆಯನ್ನೇ ಹೊಂದಿರುತ್ತದೆ. ಉತ್ತರ ಕರ್ನಾಟಕದ ಭಾಗದ ಸಂಸ್ಕೃತಿಯನ್ನು ಬಿಂಬಿಸುವ ಸಿನಿಮಾಗಳನ್ನು ಇವರು ಮಾಡಲ್ಲ ಎನ್ನುವ ಅಪವಾದವಿದೆ.

ಈ ಬಗ್ಗೆ ರಕ್ಷಿತ್ ನಿನ್ನೆ ಸ್ಪಷ್ಟನೆ ಕೊಟ್ಟಿದ್ದಾರೆ. ‘ಉತ್ತರ ಕರ್ನಾಟಕದ ಮಂದಿ ಸಿನಿಮಾಗೆ ಬರಬೇಕು. ನಮ್ಮಲ್ಲಿ ನಟರು, ನಿರ್ದೇಶಕರು ಹೆಚ್ಚಾಗಬೇಕು. ಯಾಕೆಂದರೆ ಇಂಡಸ್ಟ್ರಿ ಬೆಳೆದರೆ ಮಾತ್ರ ನಾವು ಬೆಳೆಯಲು ಸಾಧ್ಯ. ನಮಗೆ ಈ ಇಂಡಸ್ಟ್ರಿಯೇ ಪ್ಲ್ಯಾಟ್ ಫಾರಂ. ನಾವು ಉತ್ತರ ಕರ್ನಾಟಕದ ಶೈಲಿಯ ಸಿನಿಮಾಗಳನ್ನು ಮಾಡಕ್ಕಾಗಲ್ಲ. ಯಾಕೆಂದರೆ ಅಲ್ಲಿನ ಶೈಲಿಯ ಸಿನಿಮಾಗಳನ್ನು ಮಾಡಬೇಕೆಂದರೆ ಅಲ್ಲಿ ಕೆಲವು ಸಮಯ ಜೀವನ ಮಾಡಬೇಕು. ಅಲ್ಲಿಯ ಸಂಸ್ಕೃತಿ, ಜೀವನ ಶೈಲಿಯನ್ನು ತಿಳಿದುಕೊಳ್ಳಬೇಕು. ಇಲ್ಲದೇ ಹೋದರೆ ಅದು ಸಾಧ್ಯವಿಲ್ಲ. ಅದಕ್ಕೆ ಉತ್ತರ ಕರ್ನಾಟಕದ ಪ್ರತಿಭೆಗಳು ಸಿನಿಮಾ ರಂಗಕ್ಕೆ ಬರಲಿ. ಆಗ ಅಂತಹ ಸಿನಿಮಾಗಳು ಬರಬಹುದು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ನಿರ್ದೇಶಕ ರಾಜ್ ನಿಡಮೋರು ಜೊತೆ ಸದ್ದಿಲ್ಲದೇ ಮದುವೆಯಾದ ಸಮಂತಾ

ರಣಬೀರ್ ಕಪೂರ್ ದೈವದ ಅಪಹಾಸ್ಯ ಮಾಡುತ್ತಿದ್ದಾಗ ಸುಮ್ಮನಿದ್ರಾ ರಿಷಬ್ ಶೆಟ್ಟಿ: ಅಸಲಿ ವಿಡಿಯೋ ಇಲ್ಲಿದೆ

ರಣವೀರ್ ಸಿಂಗ್ ದೈವವನ್ನು ಅನುಕರಿಸಿ, ದೆವ್ವ ಎಂದರೂ ನಗುತ್ತಲೇ ಕೂತಾ ರಿಷಬ್ ಶೆಟ್ಟಿ, ಭಾರೀ ಆಕ್ರೋಶ

ಕಳೆದ ಸೀಸನ್‌ನಲ್ಲಿ ಧೂಳೇಬ್ಬಿಸಿದ ಈ ಜೋಡಿ , ಇನ್ಮುಂದೆ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

ಮುಂದಿನ ಸುದ್ದಿ
Show comments