ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಾಯಕರಾಗಿರುವ ಹೇಮಂತ್ ರಾವ್ ನಿರ್ದೇಶನದ ಸಪ್ತಸಾಗರದಾಚೆ ಎಲ್ಲೊ ಸಿನಿಮಾ ಟ್ರೈಲರ್ ನಿನ್ನೆ ಲಾಂಚ್ ಆಗಲಿದೆ.
									
			
			 
 			
 
 			
			                     
							
							
			        							
								
																	ಒಂದು ವಿಶಿಷ್ಟ ಪ್ರೇಮಕತೆಯೊಂದಿಗೆ ರಕ್ಷಿತ್ ಶೆಟ್ಟಿ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಈ ಟ್ರೈಲರ್ ಗೆ ನೆಟ್ಟಿಗರು ಮೆಚ್ಚುಗೆ  ವ್ಯಕ್ತಪಡಿಸಿದ್ದಾರೆ.
									
										
								
																	ಟ್ರೈಲರ್ ಲಾಂಚ್ ವೇಳೆ ಸಪ್ತಸಾಗರದಾಚೆ ಎಲ್ಲೊ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ಬಿಡುಗಡೆಯಾಗುತ್ತಾ ಎಂದು ರಕ್ಷಿತ್ ಶೆಟ್ಟಿಗೆ ಪ್ರಶ್ನೆ ಎದುರಾಗಿದೆ. ಇದಕ್ಕೆ ಉತ್ತರಿಸಿರುವ ಅವರು ಈಗ ಕನ್ನಡದಲ್ಲಿ ಮಾತ್ರ ರಿಲೀಸ್ ಆಗುತ್ತಿದೆ. ಆದರೆ ಎಲ್ಲಾ ಭಾಷೆಗಳಿಗೂ ಡಬ್ ಮಾಡಿಟ್ಟುಕೊಂಡಿದ್ದೇವೆ ಎಂದಿದ್ದಾರೆ. ಹೀಗಾಗಿ ಈ ಸಿನಿಮಾ ಕನ್ನಡದಲ್ಲಿ ಕ್ಲಿಕ್ ಆದರೆ ಕಾಂತಾರ ಸಿನಿಮಾದಂತೆ ಪರಭಾಷೆಗಳಲ್ಲೂ ಬಿಡುಗಡೆಯಾದರೂ ಅಚ್ಚರಿಯಿಲ್ಲ.