Publish Date: Wed, 10 May 2023 (20:15 IST)
Updated Date: Wed, 10 May 2023 (20:19 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಇಂದು ಮತದಾನ ಮಾಡಿದ ಬಳಿಕ ಅಮೆರಿಕಾಗೆ ಪ್ರಯಾಣ ಬೆಳೆಸಿದ್ದಾರೆ. ಇದಕ್ಕೆ ವಿಶೇಷ ಕಾರಣವೂ ಇದೆ.
ಉಡುಪಿಯಲ್ಲಿ ರಕ್ಷಿತ್ ಶೆಟ್ಟಿ ಮತ ಚಲಾಯಿಸಿದ ಬಳಿಕ ಇಂದು ರಾತ್ರಿಯೇ ಅಮೆರಿಕಾಗೆ ಪ್ರಯಾಣ ಬೆಳೆಸುತ್ತಿರುವುದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಸಪ್ತಸಾಗರದಾಚೆ ಎಲ್ಲೊ ಸಿನಿಮಾ ಶೂಟಿಂಗ್ ಮುಗಿಸಿರುವ ರಕ್ಷಿತ್ ಶೆಟ್ಟಿ ಈಗ ರಿಚರ್ಡ್ ಆಂಟನಿ ಸಿನಿಮಾ ತಯಾರಿಯಲ್ಲಿದ್ದಾರೆ. ಇದು ಉಳಿದವರು ಕಂಡಂತೆ ಸಿನಿಮಾದ ಮುಂದಿನ ಭಾಗ. ಈ ಸಿನಿಮಾದ ಸ್ಕ್ರಿಪ್ಟ್ ಬರೆಯಲು ಅಮೆರಿಕಾಗೆ ತೆರಳುತ್ತಿದ್ದಾರೆ ರಕ್ಷಿತ್ ಶೆಟ್ಟಿ.