Publish Date: Tue, 27 Aug 2019 (09:57 IST)
Updated Date: Tue, 27 Aug 2019 (10:01 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸಿನಿಮಾ ಬಂದು ವರ್ಷಗಳೇ ಆಯಿತು. ರಕ್ಷಿತ್ ರನ್ನು ಮತ್ತೆ ತೆರೆ ಮೇಲೆ ನೋಡಬೇಕೆಂದು ಕಾಯುತ್ತಿದ್ದ ಅಭಿಮಾನಿಗಳಿಗೆ ಈಗ ಮತ್ತೊಂದು ನಿರಾಸೆಯ ಸುದ್ದಿ ಬಂದಿದೆ.
ರಕ್ಷಿತ್ ಅಭಿನಯದ ಅವನೇ ಶ್ರೀಮನ್ನಾರಾಯಣ ಟ್ರೈಲರ್ ಭರ್ಜರಿ ಸದ್ದು ಮಾಡಿತ್ತು. ಈ ಸಿನಿಮಾ ಆಗಸ್ಟ್ ನಲ್ಲಿ ತೆರೆಗೆ ಬರಬಹುದು ಎಂದು ಹೇಳಲಾಗಿತ್ತು. ಆದರೆ ಇದೀಗ ಮುಂದಕ್ಕೆ ಹೋಗಿದೆ.
ಆದರೆ ಅವನೇ ಶ್ರೀಮನ್ನಾರಾಯಣ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಇನ್ನೂ ಮುಗಿದಿಲ್ಲ. ಗ್ರಾಫಿಕ್ಸ್ ಕೆಲಸಗಳು ಮುಗಿದಿಲ್ಲ. ಅದರ ಗುಣಮಟ್ಟ ಚೆನ್ನಾಗಿರಬೇಕೆಂಬ ಕಾರಣಕ್ಕೆ ಅವನೇ ಶ್ರೀಮನ್ನಾರಾಯಣ ಬಿಡುಗಡೆ ಮುಂದಕ್ಕೆ ಹಾಕಲಾಗಿದೆಯಂತೆ. ಮೂಲಗಳ ಪ್ರಕಾರ ನವಂಬರ್ ನಲ್ಲಿ ಚಿತ್ರ ಬಿಡುಗಡೆಯಾಗುವ ನಿರೀಕ್ಷೆಯಿದೆ.