Select Your Language

Notifications

webdunia
webdunia
webdunia
webdunia

ರಕ್ಷಿತ್ ಶೆಟ್ಟಿ ‘ಅವನೇ ಶ್ರೀಮನ್ನಾರಾಯಣ’ನಿಗಾಗಿ ಕಾದಿದ್ದ ಅಭಿಮಾನಿಗಳಿಗೆ ಕೊನೆಗೂ ಗುಡ್ ನ್ಯೂಸ್

ರಕ್ಷಿತ್ ಶೆಟ್ಟಿ ‘ಅವನೇ ಶ್ರೀಮನ್ನಾರಾಯಣ’ನಿಗಾಗಿ ಕಾದಿದ್ದ ಅಭಿಮಾನಿಗಳಿಗೆ ಕೊನೆಗೂ ಗುಡ್ ನ್ಯೂಸ್
ಬೆಂಗಳೂರು , ಸೋಮವಾರ, 25 ನವೆಂಬರ್ 2019 (09:17 IST)
ಬೆಂಗಳೂರು:ಕಿರಿಕ್ ಪಾರ್ಟಿ ಸಿನಿಮಾ ಬಳಿಕ ರಕ್ಷಿತ್ ಶೆಟ್ಟಿ ಸಿನಿಮಾಗಳು ಯಾವುದೂ ಹೊರಬಂದಿರಲಿಲ್ಲ. ಇದೀಗ ಬರೋಬ್ಬರಿ ಎರಡು ವರ್ಷಗಳ ಬಳಿಕ ಕೊನೆಗೂ ರಕ್ಷಿತ್ ಹೊಸ ಸಿನಿಮಾದೊಂದಿಗೆ ಪ್ರೇಕ್ಷಕರ ಎದುರು ಬರುತ್ತಿದ್ದಾರೆ.


ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿರುವ ಅವನೇ ಶ್ರೀಮನ್ನಾರಾಯಣ ಸಿನಿಮಾ ಡಿಸೆಂಬರ್ ನಲ್ಲಿ ತೆರೆ ಕಾಣುತ್ತಿದ್ದು, ಇದೀಗ ಟ್ರೈಲರ್ ಬಿಡುಗಡೆ ದಿನಾಂಕ ಫಿಕ್ಸ್ ಆಗಿದೆ. ಈ ಸಿನಿಮಾ ಯಾವಾಗ ಬಿಡುಗಡೆಯಾಗುತ್ತದೆ, ಟ್ರೈಲರ್ ಯಾವಾಗ ತೋರಿಸ್ತೀರಿ ಎಂದು ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿಗೆ ಜನ ಸಾಮಾಜಿಕ ಜಾಲತಾಣದ ಮೂಲಕ ಪ್ರಶ್ನಿಸುತ್ತಲೇ ಇದ್ದರು.

ಇದೀಗ ನವಂರ್ 28 ಕ್ಕೆ ಟ್ರೈಲರ್ ಬಿಡುಗಡೆಯಾಗುತ್ತಿರುವುದಾಗಿ ಚಿತ್ರತಂಡ ಘೋಷಿಸಿದೆ. ಈ ಸಿನಿಮಾ ಆಗಸ್ಟ್ ನಲ್ಲೇ ಬಿಡುಗಡೆ ಮಾಡಲು ಚಿತ್ರತಂಡ ಯೋಚಿಸಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಸಾಧ್ಯವಾಗಿರಲಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

‘ಒಡೆಯ’ನ ಮತ್ತೊಂದು ಹಾಡು ಇಂದು ಲಾಂಚ್