ಪವನ್ ಕಲ್ಯಾಣ್ ವಿರುದ್ಧ ಸ್ಪರ್ಧೆಗೆ ತೊಡೆ ತಟ್ಟಿದ ರಾಮ್ ಗೋಪಾಲ್ ವರ್ಮ

Krishnaveni K
ಗುರುವಾರ, 14 ಮಾರ್ಚ್ 2024 (17:24 IST)
Photo Courtesy: Twitter
ಹೈದರಾಬಾದ್: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜನಸೇನಾ ಪಕ್ಷದ ಸಂಸ್ಥಾಪಕ ಹಾಗೂ ನಟ ಪವನ್ ಕಲ್ಯಾಣ್ ಸ್ಪರ್ಧಿಸುತ್ತಿದ್ದು, ಅವರಿಗೆ ಎದುರಾಗಿ ತಾನು ಸ್ಪರ್ಧಿಸುವುದಾಗಿ ನಿರ್ದೇಶಕ ರಾಮ್ ಗೋಪಾಲ್ ವರ್ಮ ಹೇಳಿದ್ದಾರೆ.

ಆಂಧ್ರಪ್ರದೇಶದಲ್ಲಿ ಲೋಕಸಭೆ ಚುನಾವಣೆ ಬಳಿಕ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಪವನ್ ಕಲ್ಯಾಣ್ ಕಾಕಿನಾಡ ಜಿಲ್ಲೆಯ ಪೀಠಾಪುರಂ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಇದೀಗ ಅದೇ ಕ್ಷೇತ್ರದಿಂದ ತಾನೂ ಸ್ಪರ್ಧಿಸುವುದಾಗಿ ರಾಮ್ ಗೋಪಾಲ್ ವರ್ಮ ಹೇಳಿದ್ದಾರೆ.

ಆದರೆ ಇದೂ ಕೂಡಾ ಸುಖಾ ಸುಮ್ಮನೇ ಪ್ರಚಾರ ನಿಮಿತ್ತ ಗಿಮಿಕ್ಕಾ? ಅಥವಾ ನಿಜವಾಗಿಯೂ ರಾಮ್ ಗೋಪಾಲ್ ವರ್ಮ ಸ್ಪರ್ಧೆ ಮಾಡಲಿದ್ದಾರೆಯೇ ಎಂಬುದು ಖಚಿತವಾಗಿಲ್ಲ.  ನಾನು ರಾಜಕೀಯಕ್ಕೆ ಬರಲು ತೀರ್ಮಾನಿಸಿದ್ದೇನೆ. ಪೀಠಾಪುರಂ ಕ್ಷೇತ್ರದಿಂದ ನಾನು ಸ್ಪರ್ಧೆ ನಡೆಸಲಿದ್ದೇನೆ ಎಂದು ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ.

ಪವನ್ ಕಲ್ಯಾಣ್ ಪೀಠಾಪುರಂನಿಂದ ಸ್ಪರ್ಧಿಸುವುದಾಗಿ ಹೇಳಿದ ಬೆನ್ನಲ್ಲೇ ರಾಮ್ ಗೋಪಾಲ್ ವರ್ಮ ಹೀಗೊಂದು ಟ್ವೀಟ್ ಮಾಡಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಇದು ಒಂದು ಗಿಮಿಕ್ ಇರಬಹುದು ಎಂದು ಕೆಲವರು ಅಂದುಕೊಂಡಿದ್ದಾರೆ. ಇತ್ತೀಚೆಗೆ ಇಬ್ಬರೂ ಸ್ಟಾರ್ ಗಳ ಮಧ್ಯೆ ಶೀತಲ ಸಮರ ನಡೆಯುತ್ತಿದೆ. ಹೀಗಾಗಿ ಪವನ್ ಕಾಲೆಳೆಯಲು ವರ್ಮಾ ಹೀಗೆ ಮಾಡಿರಬಹುದಾ ಎಂಬ ಗುಮಾನಿಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಮುಂದಿನ ಸುದ್ದಿ
Show comments