Webdunia - Bharat's app for daily news and videos

Install App

ತಾನು ನಿಜಜೀವನದಲ್ಲೂ ಹಿರೋಯಿನ್‌ ಎಂದು ಡಿ ಬಾಸ್‌ ಅಭಿಮಾನಿಗಳ ಕಾಲೆಳೆದು, ಮತ್ತೊಂದು ಸವಾಲು ಹಾಕಿದ ರಮ್ಯಾ

Sampriya
ಭಾನುವಾರ, 27 ಜುಲೈ 2025 (10:54 IST)
Photo Credit X
ಬೆಂಗಳೂರು: ಸ್ಯಾಂಡಲ್‌ವುಡ್‌ ಕ್ವೀನ್‌, ನಟಿ ರಮ್ಯಾ ಅವರು ಈಚೆಗೆ ಹಂಚಿಕೊಂಡಿದ್ದ ಪೋಸ್ಟ್‌ ನಟ ದರ್ಶನ್‌ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಇದೀಗ ಡಿ ಬಾಸ್‌ ಅಭಿಮಾನಿಗಳಿಗೆ ಮತ್ತು ರಮ್ಯಾ ನಡುವಿನ ಸಮರ ಮತ್ತೊಂದು ಸ್ವರೂಪಕ್ಕೆ ತಿರುಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತದೆ ಎಂದು ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದ ನಟಿ ರಮ್ಯಾ ಇದೀಗ ದರ್ಶನ್‌ ಅಭಿಮಾನಿಗಳ ವಿರುದ್ಧವೂ ಕಿಡಿಕಾರಿದ್ದಾರೆ. ರಮ್ಯಾ ಅವರ ನ್ಯಾಯದ ಪೋಸ್ಟ್‌ಗೆ ದರ್ಶನ್‌ ಅಭಿಮಾನಿಗಳು ಕೆರಳಿದ್ದರು. ಅದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. 

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ. ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣ ಎಂದು ಈ ಹಿಂದೆ ತಮ್ಮ ಇನ್‌ಸ್ಟಾ ಸ್ಟೇಟಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದರು. ಆ ಪೋಸ್ಟ್ ವೈರಲ್ ಆಗ್ತಿದ್ದಂತೆ ದರ್ಶನ್ ಅಭಿಮಾನಿಗಳು ಕೆಟ್ಟ ಪದಗಳಿಂದ ರಮ್ಯಾ ವಿರುದ್ದ ಸೋಶಿಯಲ್ ಮಿಡಿಯಾದಲ್ಲಿ ಟ್ರೋಲ್ ಮಾಡಿದ್ದರು.

ಎಲ್ಲಾ ಡಿಬಾಸ್ ಅಭಿಮಾನಿಗಳಿಗೆ ನನ್ನ ಇನ್ ಸ್ಟಾಗ್ರಾಂಗೆ ಸ್ವಾಗತ ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿರುವ ರಮ್ಯಾ, ಬಹಿರಂಗ ಆಹ್ವಾನ ನೀಡಿದ್ದಾರೆ.  ಮೊದಲ ಪೋಸ್ಟ್‌ನಲ್ಲಿ ಕೇಸ್‌ ಯಾವುದೇ ಇರಲಿ, ಯಾರದ್ದೇ ಇರಲಿ, ಸದಾ ನ್ಯಾಯದ ಪರ. ತೆರೆಯಮೇಲಷ್ಟೇ ಅಲ್ಲ ನಿಜ ಜೀವನದಲ್ಲೂ ಹಿರೋಯಿನ್‌ ರಮ್ಯಾ ಎಂದು ಬರೆಯಲಾಗಿದೆ. 

ಮತ್ತೊಂದು ಪೋಸ್ಟ್‌ನಲ್ಲಿ ರೇಣುಕಾಸ್ವಾಮಿ ಅವರ ಕುಟುಂಬಕ್ಕೆ ಯಾಕೆ ನ್ಯಾಯ ಸಿಗಬೇಕು ಅನ್ನೋದಕ್ಕೇ ನಿಮ್ಮ ಕಾಮೆಂಟ್ಸ್‌ಗಳೇ ಸಾಕ್ಷಿ ಎಂದು ಪೋಸ್ಟ್‌ ಮಾಡಿ ಕಾಲೆಳೆದಿದ್ದಾರೆ.

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್, ಪವಿತ್ರಾಗೌಡ ಸೇರಿ 17 ಆರೋಪಿಗಳು ಬಂಧನವಾಗಿದ್ದರು. ಜೈಲುವಾಸದ ನಂತರ ಎಲ್ಲಾ ಆರೋಪಿಗಳು ಹೈಕೋರ್ಟ್‌ನಿಂದ ಜಾಮೀನು ಪಡೆದಿದ್ದರು. ಇದನ್ನು ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಮುಗಿದಿದೆ. ಹೈಕೋರ್ಟ್‌ ನಡೆಗೆ ಸುಪ್ರೀಂ ಕೋರ್ಟ್‌ ಆಕ್ಷೇಪ ವ್ಯಕ್ತಪಡಿಸಿದೆ. ಅಂತಿಮ ಆದೇಶ ಕೆಲವೇ ದಿನದಲ್ಲಿ ಪ್ರಕಟವಾಗಲಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಒಂದು ಮಾತು ಎಲ್ಲವನ್ನೂ ನಿಭಾಯಿಸಬಹುದಿತ್ತು: ನಟಿ ರಮ್ಯಾ

ತುಳು ಸಿನಿಮಾಗೆ ಎಂಟ್ರಿ ಕೊಟ್ಟ ಬ್ಯಾಂಗಲ್ ಬಂಗಾರಿ ಖ್ಯಾತಿಯ ಆಂಟೋನಿ, ರೂಪೇಶ್ ಶೆಟ್ಟಿ ಸಿನಿಮಾಗೆ ಗಾಯನ

ಡಿ ಫ್ಯಾನ್ಸ್ ಅಶ್ಲೀಲ ಮೆಸೇಜ್‌: ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ನಟಿ ರಮ್ಯಾ ದೂರು

₹72 ಕೋಟಿ ಆಸ್ತಿಯನ್ನು ಸಂಜಯ್‌ ದತ್‌ಗೆ ಬಿಟ್ಟು ಹೋದ ಮಹಿಳಾ ಅಭಿಮಾನಿ, ನಟ ಅದನ್ನೇನು ಮಾಡಿದ್ರೂ ಗೊತ್ತಾ

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ಮುಂದಿನ ಸುದ್ದಿ
Show comments