Daily Horoscope

ಸಿನಿಮಾ ಮಾಡಲ್ವಾ? ಅಭಿಮಾನಿಯ ಪ್ರಶ್ನೆಗೆ ನಟಿ ರಮ್ಯಾ ಪ್ರತಿಕ್ರಿಯೆ ನೋಡಿ

Webdunia
ಭಾನುವಾರ, 25 ಏಪ್ರಿಲ್ 2021 (10:51 IST)
ಬೆಂಗಳೂರು: ನಟಿ ರಮ್ಯಾ ಅಲಿಯಾಸ್ ದಿವ್ಯಾ ಸ್ಪಂದನ ಬಹಳ ದಿನಗಳ ನಂತರ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳೊಂದಿಗೆ ಚಿಟ್ ಚ್ಯಾಟ್ ನಡೆಸಿದ್ದಾರೆ.


ಈ ವೇಳೆ ಅಭಿಮಾನಿಗಳಲ್ಲಿ ಅನೇಕರು ನೀವು ಯಾಕೆ ಸಿನಿಮಾ ಮಾಡೋದನ್ನು ನಿಲ್ಲಿಸಿದ್ರಿ? ಸಿನಿಮಾಗೆ ಕಮ್ ಬ್ಯಾಕ್ ಮಾಡ್ತೀರಾ? ಇತ್ಯಾದಿ ಪ್ರಶ್ನೆಗಳನ್ನೇ ಹೆಚ್ಚಾಗಿ ಕೇಳಿದ್ದಾರೆ. ಇದಕ್ಕೆ ಅವರು ಹೇಳಿದ್ದೇನು ಗೊತ್ತಾ?

ಅಭಿಮಾನಿಯೊಬ್ಬರು ಯಾಕೆ ನೀವು ಸಿನಿಮಾ ಮಾಡೋದನ್ನು ನಿಲ್ಲಿಸಿದ್ರಿ ಎಂಬ ಪ್ರಶ್ನೆಗೆ ರಮ್ಯಾ ನನಗೆ ಬೋರ್ ಆಯ್ತು ಎಂದಿದ್ದಾರೆ. ಮತ್ತೆ ಯಾಕೆ ಕಮ್ ಬ್ಯಾಕ್ ಮಾಡಬಾರದು ಎಂಬ ಪ್ರಶ್ನೆಗೆ ಆ ದೋಣಿ ನನ್ನಿಂದ ಬಹಳ ದೂರ ಸಾಗಿದೆ ಎಂದು ಮಾರ್ಮಿಕವಾಗಿ ಉತ್ತರಿಸಿದ್ದಾರೆ. ಮತ್ತೊಬ್ಬರ ಪ್ರಶ್ನೆಗೆ ರಮ್ಯಾ ನನಗೆ ಸಿನಿಮಾ ಹಣ, ಕೀರ್ತಿ ಎಲ್ಲವನ್ನೂ ನೀಡಿದೆ. ಸಿನಿ ಜೀವನದ ನೆನಪುಗಳು ಮಧುರ ಎಂದಿದ್ದಾರೆ. ಆದರೆ ಕಮ್ ಬ್ಯಾಕ್ ಮಾಡುವ ಬಗ್ಗೆ ಯೋಚನೆಯೇ ಇಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.

ಇನ್ನೊಬ್ಬ ಅಭಿಮಾನಿ ನೀವು ಈಗ ಎಲ್ಲಿ ಇದ್ದೀರಾ? ಏನು ಮಾಡ್ತಿದ್ದೀರಾ? ಎಂಬ ಪ್ರಶ್ನೆಗಳಿಗೆ ರಮ್ಯಾ ಸರಿಯಾದ ಉತ್ತರ ನೀಡಿಲ್ಲ. ನಾನು ನಿಮ್ಮ ಮನಸ್ಸಲ್ಲಿರುವೆ. ಎಲ್ಲರಂತೆ ನಾನೂ ಸಾಮಾನ್ಯ ಜೀವನ ನಡೆಸುತ್ತಿದ್ದೇನೆ ಎಂದು ಹಾರಿಕೆಯ ಉತ್ತರ ನೀಡಿದ್ದಾರೆ. ರಾಜಕೀಯದಲ್ಲೂ ನನ್ನ ಕರ್ತವ್ಯ ಮುಗಿದಿದೆ ಎನ್ನುವ ಮೂಲಕ ಆ ಅನುಮಾನಗಳಿಗೂ ಫುಲ್ ಸ್ಟಾಪ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments