Select Your Language

Notifications

webdunia
webdunia
webdunia
webdunia

ರೇಪ್‌ ಆರೋಪ ಆಧಾರ ರಹಿತ: ಸಾಬೀತಿಗೆ ಯಾವ ಹಂತಕ್ಕೂ ಹೋಗಲು ಸಿದ್ಧ ಎಂದ ನಿವಿನ್

Justice Hema Committee Report

Sampriya

ಕೊಚ್ಚಿ , ಬುಧವಾರ, 4 ಸೆಪ್ಟಂಬರ್ 2024 (14:01 IST)
Photo Courtesy X
ಕೊಚ್ಚಿ: ನ್ಯಾ. ಹೇಮಾ ಸಮಿತಿ ವರದಿಯು ಕೇರಳ ಚಿತ್ರರಂಗದಲ್ಲಿ ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ. ದಿನಕ್ಕೊಬ್ಬರ ವಿರುದ್ಧ ಪ್ರಕರಣಗಳು ದಾಖಲಾಗುತ್ತಿವೆ.

ಮಲಯಾಳ ನಟ ನಿವಿನ್‌ ಪೌಳಿ ವಿರುದ್ಧವೂ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಅದಕ್ಕೆ ಪ್ರತಿಕ್ರಿಯಿಸಿರುವ ಅವರು, ಆಧಾರ ರಹಿತ ಆರೋಪದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ.

ನ್ಯಾ. ಹೇಮಾ ಸಮಿತಿ ವರದಿ ಬಿಡುಗಡೆಯಾದ ಬೆನ್ನಲ್ಲೇ ಮಲಯಾಳ ಚಿತ್ರರಂಗದ ಹಲವು ಕಲಾವಿದರ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪಗಳು ಕೇಳಿಬಂದಿದ್ದು, 40 ವರ್ಷದ ಮಹಿಳೆಯೊಬ್ಬರು ನಿವಿನ್‌ ಪೌಳಿ ವಿರುದ್ಧ ಮಂಗಳವಾರ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ವರ್ಷದ ಹಿಂದೆ ದುಬೈನಲ್ಲಿ ನಿವಿನ್ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಹೇಳಿದ್ದಾರೆ.

ಆರೋಪದ ಕುರಿತು ಎಕ್ಸ್‌ನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ನಿವಿನ್‌, 'ನನ್ನ ವಿರುದ್ಧ ಮಹಿಳೆಗೆ ಲೈಂಗಿಕ ದೌರ್ಜನ್ಯ ನೀಡಿದ ಸುದ್ದಿಯೊಂದು ವರದಿಯಾಗಿದ್ದು, ಇದು ಸಂಪೂರ್ಣ ಸುಳ್ಳಿನಿಂದ ಕೂಡಿದೆ. ಈ ಆರೋಪಗಳು ಆಧಾರ ರಹಿತವಾಗಿದೆ ಎಂದು ಹೇಳಿದ್ದಾರೆ.

ಆರೋಪಗಳು ಆಧಾರ ರಹಿತ ಎಂಬುದನ್ನು ಸಾಬೀತುಪಡಿಸಲು ಯಾವ ಹಂತಕ್ಕೂ ಹೋಗಲು ನಾನು ಸಿದ್ಧನಾಗಿದ್ದೇನೆ. ಆರೋಪ ಮಾಡಿರುವವರ ವಿರುದ್ಧ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತೇನೆ. 

Share this Story:

Follow Webdunia kannada

ಮುಂದಿನ ಸುದ್ದಿ

ಚಾರ್ಜ್ ಶೀಟ್ ಸಲ್ಲಿಕೆ ಬೆನ್ನಲ್ಲೇ ದರ್ಶನ್ ಗೆ ಟೆನ್ಷನ್: ಜೈಲು ಅಧಿಕಾರಿಗಳ ಮುಂದೆ ಮತ್ತೊಂದು ಬೇಡಿಕೆ