ಅತ್ಯಾಚಾರ ಪ್ರಕರಣ: ಮಲಯಾಳ ನಟ ಸಿದ್ದೀಕ್‌ಗೆ ಸುಪ್ರೀಂ ಕೋರ್ಟ್‌ನಿಂದ ಗುಡ್‌ನ್ಯೂಸ್‌

Sampriya
ಮಂಗಳವಾರ, 19 ನವೆಂಬರ್ 2024 (14:50 IST)
Photo Courtesy X
ನವದೆಹಲಿ: ನಟಿ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಮಲಯಾಳ ನಟ ಸಿದ್ದೀಕ್‌ಗೆ ಸುಪ್ರೀಂ ಕೋರ್ಟ್ ಇಂದು (ಮಂಗಳವಾರ) ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಷರತ್ತು ಬದ್ಧ ಜಾಮೀನು ನೀಡಿದೆ. ಪಾಸ್‌ಪೋರ್ಟ್ ಅನ್ನು ಅಧಿಕಾರಿಗಳಿಗೆ ಒಪ್ಪಿಸಬೇಕು ಹಾಗೂ ತನಿಖೆಗೆ ಸಹಕರಿಸುವಂತೆ ಸಿದ್ದೀಕ್‌ ಅವರಿಗೆ ಸೂಚಿಸಲಾಗಿದೆ.

2016ರಲ್ಲಿ ಸಿದ್ದೀಕ್ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರೆಂದು ನಟಿಯೊಬ್ಬರು ಮ್ಯೂಸಿಯಂ ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದರು.

ಮಾಲಿವುಡ್‌ನ ಹಲವು ನಿರ್ದೇಶಕರು ಮತ್ತು ನಟರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕುರಿತಾದ ನಿವೃತ್ತ ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿಯು ಬಹಿರಂಗವಾದ ಬಳಿಕ ಚಿತ್ರರಂಗದ ಹೈ ಪ್ರೊಫೈಲ್ ವ್ಯಕ್ತಿ ವಿರುದ್ಧ ದಾಖಲಾದ ಎರಡನೇ ಎಫ್‌ಐಆರ್ ಇದಾಗಿದೆ.

2009ರಲ್ಲಿ ನಡೆದ ಘಟನೆಯೊಂದಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ನಟಿಯೊಬ್ಬರು ನೀಡಿದ ದೂರಿನ ಮೇರೆಗೆ ನಿರ್ದೇಶಕ ರಂಜಿತ್ ವಿರುದ್ಧ ಐಪಿಸಿ ಸೆಕ್ಷನ್ 354ರ (ಮಹಿಳೆಯರ ಮೇಲಿನ ದೌರ್ಜನ್ಯ) ಅಡಿ ಮೊದಲ ಪ್ರಕರಣ ದಾಖಲಾಗಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ