ಬೆಂಗಳೂರು: ಸ್ಯಾಂಡಲ್ ವುಡ್ ನಟ, ನಿರ್ದೇಶಕರೊಬ್ಬರ ವಿರುದ್ಧ ಅತ್ಯಾಚಾರವೆಸಗಿದ ಆರೋಪ ದಾಖಲಾಗಿದೆ.
ವಿಷನ್ 2023 ಎಂಬ ಚಿತ್ರ ನಿರ್ದೇಶಿಸಿ ನಟಿಸಿದ್ದ ಹರ್ಷವರ್ಧನ್ ಎಂಬವರ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ. ನೀಲಿ ಚಿತ್ರ ತೋರಿಸಿ ಸಹ ನಟಿಯ ಮೇಲೆ ನಿರಂತರ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಸಹನಟಿ ದೂರು ನೀಡಿದ್ದು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾಗಿ ಹೇಳಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.